ದೇವನಹಳ್ಳಿ: ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ (gold smuggling) ಮಾಡುತ್ತಿದ್ದ 10 ಜನ ಪ್ರಯಾಣಿಕರನ್ನ ವಶಕ್ಕೆ ಪಡೆದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನ ವಶಕ್ಕೆ ಪಡೆದಿದ್ದಾರೆ.
![10 passengers arrested for smuggling gold](https://etvbharatimages.akamaized.net/etvbharat/prod-images/kn-bng-02-coustms-av-ka10056_22112021103859_2211f_1637557739_1059.jpg)
ನವೆಂಬರ್ 20 ರಂದು ಕೊಲಂಬೊದಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿತ್ತು. ಆಗ 10 ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಪೆಸ್ಟ್ ರೂಪದಲ್ಲಿ ಚಿನ್ನವನ್ನ ಮರೆಮಾಚಿ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳಿಂದ 3066.55 ಗ್ರಾಂ ತೂಕದ 1,51, 79, 412 ರೂ. ಮೌಲ್ಯದ ಚಿನ್ನವನ್ನ ಜಪ್ತಿ ಪಡೆಯಲಾಗಿದ್ದು, ವಿಚಾರಣೆ ಮುಂದುವರೆದಿದೆ.