ಬೆಂಗಳೂರು: ಲೋಕಸಭೆ ಚುನಾವಣಾ ಕರ್ತವ್ಯ ಹಿನ್ನೆಲೆಯಲ್ಲಿ ನಗರದ ವಿವಿಧ ಠಾಣೆಗಳಿಗೆ ತಾತ್ಕಾಲಿಕವಾಗಿ ನಿಯೋಜನೆಗೊಂಡಿದ್ದ ನಗರದ 108 ಪೊಲೀಸ್ ಇನ್ಸ್ಪೆಕ್ಟರ್ (ಪಿಎಸ್ಐ) ಗಳನ್ನು ಮರಳಿ ಮಾತೃ ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ಮುನ್ನ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಪೊಲೀಸ್ ಇಲಾಖೆಯು ನಗರದ 108 ಪಿಎಸ್ಐಗಳನ್ನು ವರ್ಗಾವಣೆ ಮಾಡಿತ್ತು. ಮಾದರಿ ಚುನಾವಣಾ ನೀತಿ ಸಂಹಿತೆ ಮುಗಿದ ಕೆಲ ದಿನಗಳ ಬಳಿಕ ಇದೀಗ ಮಾತೃ ಠಾಣೆಗಳಿಗೆ ತೆರಳುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.