ETV Bharat / city

ಮತ ಎಣಿಕೆ ಹಿನ್ನೆಲೆ: ಬೆಂಗಳೂರಲ್ಲಿ ಭದ್ರತೆಗಾಗಿ 1,300 ಪೊಲೀಸರ ನಿಯೋಜನೆ - ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಉಪ ಚುನಾವಣೆಯ ಮತ ಎಣಿಕೆ ಸೋಮವಾರ ನಡೆಯಲ್ಲಿದ್ದು, ‌ಈ ವೇಳೆ ಯಾವುದೇ ಅಹಿತಕರ ಘಟನೆ‌ ನಡೆಯದಂತೆ ನಗರ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ

author img

By

Published : Dec 7, 2019, 2:39 PM IST

ಬೆಂಗಳೂರು: ಉಪ ಚುನಾವಣೆಯ ಮತ ಎಣಿಕೆ ಸೋಮವಾರ ನಡೆಯಲ್ಲಿದ್ದು, ‌ಈ ವೇಳೆ ಯಾವುದೇ ಅಹಿತಕರ ಘಟನೆ‌ ನಡೆಯದಂತೆ ನಗರ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ

ಕೆ.ಆರ್.ಪುರಂ, ಶಿವಾಜಿನಗರ, ಯಶವಂತಪುರ, ಮಹಾಲಕ್ಷ್ಮೀ‌ ಲೇಔಟ್ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಮಹಾಲಕ್ಷ್ಮಿ ಲೇಔಟ್ ಮತ್ತು ಕೆ.ಆರ್.ಪುರಂ ಕ್ಷೇತ್ರದ ಮತ ಎಣಿಕೆ ಸೇಂಟ್ ಜೋಸೆಫ್ ಕಾಲೇಜ್​ನಲ್ಲಿ ನಡೆಯಲಿದ್ದು, ಯಶವಂತಪುರ ಕ್ಷೇತ್ರದ ಎಣಿಕೆ ಕೆಂಗೇರಿಯ ಆರ್.ವಿ ಎಂಜಿನಿಯರಿಂಗ್ ಕಾಲೇಜ್, ಶಿವಾಜಿನಗರ ಕ್ಷೇತ್ರದ ಮತ ಎಣಿಕೆ ಮೌಂಟ್ ಕಾರ್ಮೆಲ್ ಕಾಲೇಜು ಹಾಗೂ ಹೊಸಕೋಟೆ ಕ್ಷೇತ್ರದ ಮತ ಎಣಿಕೆ ದೇವನಹಳ್ಳಿ ಆಕಾಶ್ ಇಂಟರ್ ನ್ಯಾಷನಲ್ ಕಾಲೇಜು ಬಳಿ ನಡೆಯಲಿದೆ‌.

ಪ್ರತಿ ಮತ ಎಣಿಕೆ ಕೇಂದ್ರದ ಬಳಿ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ನೀಡಲಾಗುತ್ತದೆ. ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಕಡ್ಡಾಯವಾಗಿ ಪಾಸ್ ಹೊಂದಿರುವವರಿಗೆ ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗಿದೆ. ಪ್ಯಾರಾ ಮಿಲಿಟರಿ ಮತ್ತು ಕೆಎಸ್ಆರ್ ತುಕಡಿಗಳು ಸೇರಿದಂತೆ ಒಟ್ಟು 1,300 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆಯಿಂದಲೂ ಮದ್ಯ ನಿಷೇಧ ಮಾಡಲಾಗಿದೆ ಎಂದು‌ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

Intro:

Body:byte

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.