ಬೆಂಗಳೂರು: ಡಿ. 7ರಿಂದ 15ರವರೆಗೂ ನಡೆಯುವ ವಿಧಾನಸಭಾ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ ಎರಡು ಕಿ.ಮೀ. ಸುತ್ತಮುತ್ತಲು ನಿಷೇಧಾಜ್ಞೆ ಹೇರಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಅಧಿವೇಶನ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆ, ಸತ್ಯಾಗ್ರಹ, ಮೆರವಣಿಗೆ ನಡೆಸುವ ಸಾಧ್ಯತೆಯಿದೆ. ಈ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವ ಸಂಭವವಿದೆ. ಹೀಗಾಗಿ ಮಾ. 7ರ ಬೆಳಗ್ಗೆ 6 ಗಂಟೆಯಿಂದ ವಿಧಾನಸೌಧದ 2 ಕಿ.ಮೀ. ಸುತ್ತಮುತ್ತಲು ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ಈ ಸುದ್ದಿಯನ್ನೂ ಓದಿ: ಡ್ರಗ್ಸ್ ಜಾಲ: ನಟಿಮಣಿಯರ ಕೂದಲು ಸ್ಯಾಂಪಲ್ ಸಂಗ್ರಹಕ್ಕೆ ಅನುಮತಿ ನೀಡಿದ ಕೋರ್ಟ್
ಈ ವೇಳೆ 5ಕ್ಕಿಂತ ಹೆಚ್ಚು ಜನ ಸೇರುವುದು, ಮೆರವಣಿಗೆ ಅಥವಾ ಸಭೆ ನಡೆಸುವುದು ಹಾಗೂ ಪಟಾಕಿ ಸಿಡಿಸುವುದು ಕಾನೂನು ಬಾಹಿರವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.