ETV Bharat / city

ಸುಪ್ರೀಂ ಕೋರ್ಟ್​ನಿಂದ ಡಾ.ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ 1,475 ಕಟ್ಟಡಗಳಿಗೆ ರಿಲೀಫ್ - 1475 buildings in shivaram karanth layout regularised by supreme court

ಡಾ.ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯಲ್ಲಿ ಬರುವ ಬಿಡಿಎ ಅನುಮೋದಿತ 13 ಬಡಾವಣೆಗಳು ಮತ್ತು ನಿರ್ಮಾಣ ಹಂತದಲ್ಲಿರುವ 2 ಬಹುಮಹಡಿ ಅಪಾರ್ಟ್​ಮೆಂಟ್​ ಸಂಕೀರ್ಣಗಳನ್ನು ಸ್ವಾಧೀನಪಡಿಸಿಕೊಳ್ಳಬಾರದು ಎಂದು ಸರ್ವೋಚ್ಛ ನ್ಯಾಯಾಲಯವು ಬಿಡಿಎಗೆ ಆದೇಶ ನೀಡಿದೆ ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ತಿಳಿಸಿದರು.

Notification about Dr Shivaram Karanth Layout
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್
author img

By

Published : Apr 13, 2022, 9:31 AM IST

ಬೆಂಗಳೂರು: ಕಳೆದ 15 ತಿಂಗಳುಗಳಲ್ಲಿ ಸಮಿತಿಯು ಸರ್ವೋಚ್ಛ ನ್ಯಾಯಾಲಯಕ್ಕೆ ತಮ್ಮ 12 ವರದಿಗಳನ್ನು ಸಲ್ಲಿಸಿದೆ. ಈ ವರದಿಗಳನ್ನು ಸರ್ವೋಚ್ಛ ನ್ಯಾಯಾಲಯವು ಪರಿಗಣಿಸಿ 2014-18 ರ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ.ಶಿವರಾಮ ಕಾರಂತ ಬಡಾವಣೆಯ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. 17 ಗ್ರಾಮಗಳ 1,475 ಕಟ್ಟಡಗಳಿಗೆ ಅನುಮೋದನೆ ನೀಡಿದೆ ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ತಿಳಿಸಿದರು.

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶವನ್ನು ಎಲ್ಲ ಅರ್ಜಿದಾರರಿಗೆ ಎಸ್ಎಂಎಸ್ ಮೂಲಕ ತಿಳಿಸಲಾಗಿದೆ. ಈ ಎಲ್ಲ ಕಟ್ಟಡಗಳ ಪ್ರಮಾಣ ಪತ್ರವನ್ನು ಶೀಘ್ರದಲ್ಲಿ ವಿತರಿಸಲು ಸಮಿತಿ ರಚಿಸಲಾಗಿದೆ ಎಂದು ಹೇಳಿದರು. ಈ ಸಕ್ರಮ ಪ್ರಮಾಣ ಪತ್ರಗಳನ್ನು ಡಾ.ಶಿವರಾಮ ಕಾರಂತ ಬಡಾವಣೆ ಅಧಿಸೂಚಿತ ಪ್ರದೇಶದಲ್ಲಿ ಕಟ್ಟಡವನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಇವುಗಳನ್ನು ವಿತರಿಸುವ ಪ್ರಕ್ರಿಯೆ ಸದ್ಯದಲ್ಲಿಯೇ ಆರಂಭವಾಗಲಿದೆ ಎಂದು ತಿಳಿಸಿದರು.

ಕಟ್ಟಡ ಸಕ್ರಮಕ್ಕಾಗಿ 7,161 ಅರ್ಜಿ: ಈವರೆಗೂ ಉದ್ದೇಶಿತ ಬಡಾವಣೆಯ ವ್ಯಾಪ್ತಿಯಲ್ಲಿ ಈಗಾಗಲೇ ಕಟ್ಟಿರುವ ಕಟ್ಟಡಗಳನ್ನು ಸಕ್ರಮಗೊಳಿಸಲು 7,161 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಬದಲಿ ನಿವೇಶನ ನೀಡುವುದಕ್ಕೆ 2,248 ಅರ್ಜಿಗಳು ಬಂದಿವೆ. ಸಾರ್ವಜನಿಕರಿಂದ 2022ರ ಏಪ್ರಿಲ್ 8ರಂದು ಅರ್ಜಿಗಳ ಸ್ವೀಕರಿಸಲು ಕೊನೆಯ ದಿನವಾಗಿತ್ತು. ಒಂದು ವರ್ಷ ಕಾಲಾವಕಾಶ ನೀಡಲಾಗಿತ್ತು. ಆ ನಂತರ ಬಂದ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ತಿಳಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ಬಿಡಿಎ ಅನುಮೋದಿತ 13 ಬಡಾವಣೆ ಸ್ವಾಧೀನವಿಲ್ಲ: ಡಾ.ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯಲ್ಲಿ ಬರುವ ಬಿಡಿಎ ಅನುಮೋದಿತ 13 ಬಡಾವಣೆಗಳು ಮತ್ತು ನಿರ್ಮಾಣ ಹಂತದಲ್ಲಿರುವ 2 ಬಹುಮಹಡಿ ಅಪಾರ್ಟ್​ಮೆಂಟ್​ ಸಂಕೀರ್ಣಗಳನ್ನು ಸ್ವಾಧೀನಪಡಿಸಿಕೊಳ್ಳಬಾರದು ಎಂದು ಸರ್ವೋಚ್ಛ ನ್ಯಾಯಾಲಯವು ಬಿಡಿಎಗೆ ಆದೇಶ ನೀಡಿದೆ ಎಂದು ತಿಳಿಸಿದರು.

ಬಡಾವಣೆ 3 ರೀತಿಯಲ್ಲಿ ವರ್ಗೀಕರಣ: ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ ಕಟ್ಟಡಗಳನ್ನು 2014ಕ್ಕೆ ಮುನ್ನ 2014 ಮತ್ತು 2018ರ ನಡುವೆ ಹಾಗೂ 2018ರ ನಂತರ ನಿರ್ಮಾಣ ಎಂದು ವರ್ಗೀಕರಣ ಮಾಡುವ ಕಾರ್ಯವನ್ನು ಜೆಸಿಸಿ ಮುಂದುವರಿಸಿದೆ. ಈ ವರ್ಗೀಕರಣದ ಆಧಾರದ ಮೇಲೆ ಸೂಕ್ತ ಆದೇಶಗಳಿಗಾಗಿ ಸಮಿತಿಯು ನ್ಯಾಯಾಲಯಕ್ಕೆ ಸಲ್ಲಿಸಲಿದೆ ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ವಿವರಿಸಿದರು.

ಜೆಸಿಸಿ ನೀಡಿದ ವರದಿ ಆಧಾರದಲ್ಲಿ ಸರ್ವೋಚ್ಛ ನ್ಯಾಯಾಲಯವು ಆವಲಹಳ್ಳಿಯಲ್ಲಿ 25 ಗುಂಟೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದೆ. ಈ ಜಾಗವು ಬಿಎಂಎಸ್ ಎಜುಕೇಶನ್ ಟ್ರಸ್ಟ್ ಸೇರಿದ ಜಾಗವಾಗಿದ್ದು, ಇದು ಬಿಎಂಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಯ ಭಾಗವಾಗಿದೆ. ಈ ಟ್ರಸ್ಟ್ ಎಲ್ಲಾ ಅಗತ್ಯವಾದ ಅನುಮತಿ ಮತ್ತು ಅನುಮೋದನೆಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಪಡೆದುಕೊಂಡಿದೆ. ಬಿಡಿಎದಿಂದ ಡಿ.15 ರಂದು ಯೋಜನಾ ಅನುಮತಿಯನ್ನು ಪಡೆದುಕೊಂಡು ದಾಖಲೆಗಳನ್ನು ಸಲ್ಲಿಸಿದೆ ಎಂದು ಹೇಳಿದರು.

ಬಿಡಿಎಗೆ 393.31 ಎಕರೆ ಸರ್ಕಾರಿ ಜಮೀನು ಹಸ್ತಾಂತರ: ಈ ವೇಳೆ ಸುಪ್ರೀಂಕೋರ್ಟ್ ಹಾರೋಹಳ್ಳಿ ಗ್ರಾಮದಲ್ಲಿ ಗಡಿ ಹೊಂದಾಣಿಕೆ ಆಗದ ಕಾರಣ 34 ಗುಂಟೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದೆ. ಬಿಡಿಎಗೆ 393 ಎಕರೆ ಮತ್ತು 31 ಗುಂಟೆ ಸರ್ಕಾರಿ ಜಮೀನನ್ನು ಹಸ್ತಾಂತರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಮಿತಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆಗಳನ್ನು ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.

ರಾಜೀವ್ ಗಾಂಧಿ ವಸತಿ ನಿಗಮಕ್ಕೆ 150 ಎಕರೆ ಮಂಜೂರಿಗೆ ಸೂಚನೆ: ಬಡಾವಣೆಗೆಂದು ಗುರುತಿಸಿರುವ ಸರ್ಕಾರಿ ಭೂಮಿಯನ್ನು ಆದಷ್ಟು ಬೇಗ ಬಿಡಿಎಗೆ ಹಸ್ತಾಂತರ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಕೈಗೊಂಡು ಗಡಿಯನ್ನು ಗುರುತಿಸಬೇಕೆಂದು ಜೆಸಿಸಿ ಬಿಡಿಎ ಉಪ ಆಯುಕ್ತ ರಿಗೆ ಸೂಚನೆ ನೀಡಿದೆ. ಸರ್ವೋಚ್ಛ ನ್ಯಾಯಾಲಯವು 2022 ಮಾ.31 ರಂದು ಮಹತ್ವದ ತೀರ್ಪು ನೀಡಿದ್ದು, ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ 6 ಪ್ರತ್ಯೇಕ ಬ್ಲಾಕ್‌ಗಳಲ್ಲಿ ತಲಾ 25 ಎಕರೆಯಂತೆ ಒಟ್ಟು 150 ಎಕರೆ ಭೂಮಿಯನ್ನು ರಾಜೀವ್ ಗಾಂಧಿ ವಸತಿ ನಿಗಮ ಲಿಮಿಟೆಡ್‌ಗೆ ಮಂಜೂರು ಮಾಡುವಂತೆ ಬಿಡಿಎ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಎಲ್ಲ ಜಾಗಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮವು ಆರ್ಥಿಕವಾಗಿ ಹಿಂದುಳಿದವರಿಗೆ ಮನೆಗಳು ಅಥವಾ ಫ್ಲಾಟ್‌ಗಳನ್ನು ನಿರ್ಮಿಸಲಿದೆ. ಇಡಬ್ಲ್ಯೂಎಸ್ ಯೋಜನೆಯಡಿ ವಿಶಾಲವಾದ ಜಾಗ ಮತ್ತು ಬಹುಮಹಡಿ ಕಟ್ಟಡಗಳ ಅಪಾಟ್‌ರ್ಮೆಂಟ್‌ಗಳನ್ನು ನಿರ್ಮಾಣ ಮಾಡಬೇಕೆಂದು ಸರ್ವೋಚ್ಛ ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ. ಮಂಜೂರು ಮಾಡುವ ಭೂಮಿಯನ್ನು ಜೆಸಿಸಿ ಮೇಲ್ವಿಚಾರಣೆ ಮಾಡಬೇಕೆಂದೂ ನ್ಯಾಯಾಲಯ ಸೂಚಿಸಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸುತ್ತಿರುವ ಉದ್ದೇಶಿತ ಡಾ.ಶಿವರಾಮ್ ಕಾರಂತ ಬಡಾವಣೆ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಪರಿಶೀಲನೆ ನಡೆಸಿ ಅವುಗಳನ್ನು ಸಕ್ರಮಗೊಳಿಸುವ ಸಂಬಂಧ ಅಧ್ಯಯನ ನಡೆಸಿ ಶಿಫಾರಸು ಮಾಡಲು ಸರ್ವೋಚ್ಛ ನ್ಯಾಯಾಲಯವು ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿ(ಜೆಸಿಸಿ)ಯನ್ನು ಡಿಸೆಂಬರ್ 2020 ರಲ್ಲಿ ನೇಮಕ ಮಾಡಿತ್ತು ಎಂದು ಹೇಳಿದರು.

ಮಾಧ್ಯಮಗೋಷ್ಟಿಯಲ್ಲಿ ಸಮಿತಿಯ ಸದಸ್ಯರಾದ ನಿವೃತ್ತ ಐ.ಎ.ಎಸ್ ಅಧಿಕಾರಿ ಜೈಕರ್ ಜೆರೋಮ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಟಿ ರಮೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಡಾ.ಶಿವರಾಮ ಕಾರಂತ ಬಡಾವಣೆ ಸ್ಥಳದ ಭೂಮಾಲೀಕರಿಗೆ ಗುಡ್ ನ್ಯೂಸ್ - ಸಕ್ರಮಗೊಳ್ಳಲಿವೆ 300 ಕಟ್ಟಡಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.