ETV Bharat / city

ಜಿಯೋ ಪ್ಲಾಟ್‌ಫಾರ್ಮ್​​​ನಲ್ಲಿ ಇಂಟೆಲ್ ಕ್ಯಾಪಿಟಲ್‌ 1,894.50 ಕೋಟಿ ರೂ. ಹೂಡಿಕೆ

1,894.50 ಕೋಟಿ ರೂಪಾಯಿಯನ್ನು ಇಂಟೆಲ್ ಕ್ಯಾಪಿಟಲ್ ಸಂಸ್ಥೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಹೂಡಿಕೆ ಮಾಡಲಿದೆಯೆಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ರಿಲಯನ್ಸ್ ಇಂಡಸ್ಟ್ರೀಸ್) ಹಾಗೂ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ (ಜಿಯೋ ಪ್ಲಾಟ್‌ಫಾರ್ಮ್ಸ್) ಇಂದು ಘೋಷಿಸಿದೆ.

author img

By

Published : Jul 3, 2020, 8:08 PM IST

1894-dot-50-crore-on-intel-capital-from-geo-platforms-investment
ಮುಖೇಶ್ ಅಂಬಾನಿ

ಮುಂಬಯಿ/ಬೆಂಗಳೂರು: ಇಂಟೆಲ್ ಕ್ಯಾಪಿಟಲ್ ಸಂಸ್ಥೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 1,894.50 ಕೋಟಿ ರೂ. ಹೂಡಿಕೆ ಮಾಡಲಿದೆಯೆಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ರಿಲಯನ್ಸ್ ಇಂಡಸ್ಟ್ರೀಸ್) ಹಾಗೂ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ (ಜಿಯೋ ಪ್ಲಾಟ್‌ಫಾರ್ಮ್ಸ್) ಇಂದು ಘೋಷಿಸಿದ್ದು, ಈ ಹೂಡಿಕೆಯಿಂದ ಜಿಯೋ ಪ್ಲಾಟ್‌ಫಾರ್ಮ್ಸ್‌ನ ಈಕ್ವಿಟಿ ಮೌಲ್ಯ 4.91 ಲಕ್ಷ ಕೋಟಿ ರೂ. ಹಾಗೂ ಎಂಟರ್‌ಪ್ರೈಸ್ ಮೌಲ್ಯ 5.16 ಲಕ್ಷ ಕೋಟಿ ರೂ. ಆಗಲಿದೆ.

ಇಂಟೆಲ್ ಕ್ಯಾಪಿ‌ಟಲ್‌ನ ಹೂಡಿಕೆಯು ಫುಲ್ಲಿ ಡೈಲ್ಯೂಟೆಡ್ ಬೇಸಿಸ್‌ನಲ್ಲಿ ಜಿಯೋ ಪ್ಲಾಟ್‌ಫಾರ್ಮ್ಸ್‌ನ 0.39% ಈಕ್ವಿಟಿ ಪಾಲುದಾರಿಕೆಗೆ ಸಮಾನವಾಗಿರಲಿದೆ. ಈ ಹೂಡಿಕೆಯೊಡನೆ, ಇತ್ತೀಚೆಗೆ ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಹೂಡಿಕೆ ಮಾಡಿರುವ ಮುಂಚೂಣಿ ಸಂಸ್ಥೆಗಳ ಸಾಲಿಗೆ ಇಂಟೆಲ್ ಕ್ಯಾಪಿಟಲ್ ಕೂಡ ಸೇರಿದಂತಾಗಿದ್ದು, ಹೂಡಿಕೆಯ ಒಟ್ಟಾರೆ ಮೊತ್ತ 1,17,588.45 ಕೋಟಿ ರೂ.ಗಳಿಗೆ ತಲುಪಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಜಿಯೋ ಪ್ಲಾಟ್‌ಫಾರ್ಮ್ಸ್, ಭಾರತದಾದ್ಯಂತ ಉನ್ನತ ಗುಣಮಟ್ಟದ ಹಾಗೂ ಕೈಗೆಟುಕುವ ದರದ ಡಿಜಿಟಲ್ ಸೇವೆಗಳನ್ನು ಒದಗಿಸುವತ್ತ ತನ್ನ ಗಮನವನ್ನು ಕೇಂದ್ರೀಕರಿಸಿರುವ ಮುಂದಿನ ತಲೆಮಾರಿನ ತಂತ್ರಜ್ಞಾನ ವೇದಿಕೆಯಾಗಿದ್ದು, ಅದಕ್ಕೆ 388 ದಶಲಕ್ಷಕ್ಕೂ ಹೆಚ್ಚಿನ ಚಂದಾದಾರರಿದ್ದಾರೆ.

ಬ್ರಾಡ್‌ಬ್ಯಾಂಡ್ ಸಂಪರ್ಕ, ಸ್ಮಾರ್ಟ್ ಸಾಧನಗಳು, ಕ್ಲೌಡ್ ಮತ್ತು ಎಡ್ಜ್ ಕಂಪ್ಯೂಟಿಂಗ್, ಬಿಗ್ ಡೇಟಾ ಅನಲಿಟಿಕ್ಸ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಇಂಟರ್‌ನೆಟ್ ಆಫ್ ಥಿಂಗ್ಸ್, ಆಗ್ಮೆಂಟೆಡ್ ಮತ್ತು ಮಿಕ್ಸೆಡ್ ರಿಯಾಲಿಟಿ ಹಾಗೂ ಬ್ಲಾಕ್‌ಚೈನ್‌ನಂತಹ ಮುಂಚೂಣಿ ತಂತ್ರಜ್ಞಾನಗಳಿಂದ ಚಾಲಿತವಾಗಿರುವ ತನ್ನ ಡಿಜಿಟಲ್ ಇಕೋಸಿಸ್ಟಂನಾದ್ಯಂತ ಜಿಯೋ ಪ್ಲಾಟ್‌ಫಾರ್ಮ್ಸ್ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ.

ಒಳಗೊಳ್ಳುವ ಬೆಳವಣಿಗೆಯ ಫಲಗಳನ್ನು ಎಲ್ಲರೂ ಆನಂದಿಸುವಂತೆ ಮಾಡಲು, ಸಣ್ಣ ವರ್ತಕರು, ಅತಿಸಣ್ಣ ಉದ್ಯಮಗಳು ಹಾಗೂ ರೈತರೂ ಸೇರಿದಂತೆ ಭಾರತದಾದ್ಯಂತ 1.3 ಶತಕೋಟಿ ಜನರು ಹಾಗೂ ಉದ್ಯಮಗಳಿಗೆ ಡಿಜಿಟಲ್ ಇಂಡಿಯಾವನ್ನು ಸಾಧ್ಯವಾಗಿಸುವುದು ಜಿಯೋದ ದೂರದೃಷ್ಟಿಯಾಗಿದೆ. ಜಿಯೋ ಕೂಡ ಹೊಸತನ ತರುತ್ತಿರುವ ಹಾಗೂ ಬೆಳವಣಿಗೆಗಾಗಿ ಹೂಡಿಕೆ ಮಾಡುತ್ತಿರುವ ಅವಕಾಶಗಳಾದ ಕ್ಲೌಡ್ ಕಂಪ್ಯೂಟಿಂಗ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು 5ಜಿಯಂತಹ ಪರಿವರ್ತನಕಾರಿ ತಂತ್ರಜ್ಞಾನ ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಿರುವ ವಿನೂತನ ಸಂಸ್ಥೆಗಳಲ್ಲಿ ಇಂಟೆಲ್ ಕ್ಯಾಪಿಟಲ್ ಜಾಗತಿಕವಾಗಿ ಹೂಡಿಕೆ ಮಾಡುತ್ತದೆ.

ಇಂಟೆಲ್ ಕ್ಯಾಪಿಟಲ್ ಸಂಸ್ಥೆಯು, ಜಾಗತಿಕ ಆವಿಷ್ಕಾರಗಳ ಅಡಿಪಾಯವಾಗಿರುವ ಕಂಪ್ಯೂಟಿಂಗ್ ಮತ್ತು ಸಂವಹನ ತಂತ್ರಜ್ಞಾನದೊಂದಿಗೆ ಡೇಟಾ-ಕೇಂದ್ರಿತ ಭವಿಷ್ಯವನ್ನು ರೂಪಿಸುತ್ತಿರುವ, ಅರೆವಾಹಕ ಉದ್ಯಮದ ನಾಯಕತ್ವ ಸ್ಥಾನದಲ್ಲಿರುವ ಇಂಟೆಲ್ ಕಾರ್ಪೊರೇಶನ್‌ನ ಹೂಡಿಕೆ ಅಂಗವಾಗಿದೆ. ಇಂಟೆಲ್ ಭಾರತದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿರುವ ಅದರ ಅತ್ಯಾಧುನಿಕ ವಿನ್ಯಾಸ ಕೇಂದ್ರಗಳಲ್ಲಿ ಸಾವಿರಾರು ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ, ಭಾರತವನ್ನು ವಿಶ್ವದ ಪ್ರಮುಖ ಡಿಜಿಟಲ್ ಸಮಾಜವಾಗಿ ಪರಿವರ್ತಿಸುವ ನಮ್ಮ ದೃಷ್ಟಿಯನ್ನು ಸಾಕಾರಗೊಳಿಸುವ ತಂತ್ರಜ್ಞಾನ ನಾಯಕರೊಂದಿಗಿನ ನಮ್ಮ ಸಂಬಂಧವನ್ನು ಇನ್ನಷ್ಟು ಗಾಢವಾಗಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಉದ್ಯಮದ ನೈಜ ನಾಯಕತ್ವ ಸ್ಥಾನದಲ್ಲಿರುವ ಇಂಟೆಲ್ ಸಂಸ್ಥೆಯು ವಿಶ್ವವನ್ನೇ ಬದಲಿಸುವ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಜಾಗತಿಕವಾಗಿ ಪ್ರಮುಖ ತಂತ್ರಜ್ಞಾನ ಕಂಪನಿಗಳಿಗೆ ಅಮೂಲ್ಯವಾದ ಪಾಲುದಾರನಾಗಿರುವ ಅತ್ಯುತ್ತಮ ದಾಖಲೆ ಇಂಟೆಲ್ ಕ್ಯಾಪಿಟಲ್‌ನದು. ಆದ್ದರಿಂದ, ನಮ್ಮ ಆರ್ಥಿಕತೆಯ ಎಲ್ಲ ಕ್ಷೇತ್ರಗಳನ್ನು ಸಬಲೀಕರಣಗೊಳಿಸುವ ಮತ್ತು 1.3 ಶತಕೋಟಿ ಭಾರತೀಯರ ಜೀವನ ಮಟ್ಟವನ್ನು ಸುಧಾರಿಸುವ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಭಾರತದ ಸಾಮರ್ಥ್ಯವನ್ನು ಹೆಚ್ಚಿಸಲು ಇಂಟೆಲ್‌‌ನ ಜೊತೆಗೂಡಿ ಕೆಲಸ ಮಾಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.

ಇಂಟೆಲ್ ಕ್ಯಾಪಿಟಲ್ ಅಧ್ಯಕ್ಷರಾದ ವೆಂಡೆಲ್ ಬ್ರೂಕ್ಸ್, ಕಡಿಮೆ ವೆಚ್ಚದ ಡಿಜಿಟಲ್ ಸೇವೆಗಳ ಶಕ್ತಿಯನ್ನು ಭಾರತಕ್ಕೆ ತರಲು ತನ್ನ ಪ್ರಭಾವಶಾಲಿ ಇಂಜಿನಿಯರಿಂಗ್ ಸಾಮರ್ಥ್ಯಗಳನ್ನು ಅನ್ವಯಿಸುವ ನಿಟ್ಟಿನಲ್ಲಿ ಜಿಯೋ ಪ್ಲಾಟ್‌ಫಾರ್ಮ್ಸ್‌ನ ಗಮನ ಕೇಂದ್ರೀಕೃತವಾಗಿದ್ದು, ಜೀವನವನ್ನು ಸಮೃದ್ಧಗೊಳಿಸುವ ಮಹತ್ವದ ತಂತ್ರಜ್ಞಾನವನ್ನು ಎಲ್ಲರಿಗೂ ತಲುಪಿಸುವ ಇಂಟೆಲ್‌ನ ಉದ್ದೇಶದೊಂದಿಗೆ ಇದು ಹೊಂದಿಕೊಳ್ಳುತ್ತದೆ. ಉದ್ದಿಮೆ ಮತ್ತು ಸಮಾಜವನ್ನು ಡಿಜಿಟಲ್ ಆಕ್ಸೆಸ್ ಹಾಗೂ ಡೇಟಾ ಉತ್ತಮವಾಗಿ ಪರಿವರ್ತಿಸುತ್ತದೆ ಎಂದು ನಾವು ನಂಬುತ್ತೇವೆ. ಈ ಹೂಡಿಕೆಯ ಮೂಲಕ, ಇಂಟೆಲ್ ಪ್ರಮುಖ ಉಪಸ್ಥಿತಿಯನ್ನು ಕಾಯ್ದುಕೊಂಡಿರುವ ಭಾರತದಲ್ಲಿ ಡಿಜಿಟಲ್ ರೂಪಾಂತರದ ಉತ್ತೇಜನಕ್ಕೆ ನೆರವಾಗಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.

ಈ ವಹಿವಾಟು, ನಿಯಂತ್ರಕರ ಹಾಗೂ ಮತ್ತಿತರ ಅಗತ್ಯ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ರಿಲಯನ್ಸ್ ಇಂಡಸ್ಟ್ರೀಸ್‌‌ನ ಹಣಕಾಸು ಸಲಹೆಗಾರರಾಗಿ ಮೋರ್ಗನ್ ಸ್ಟಾನ್ಲಿ ಹಾಗೂ ವಕೀಲರಾಗಿ ಎಜಡ್‌ಬಿ ಆಂಡ್ ಪಾರ್ಟ್‌ನರ್ಸ್ ಹಾಗೂ ಡೇವಿಸ್ ಪೋಲ್ಕ್ ಆಂಡ್ ವಾರ್ಡ್‌ವೆಲ್ ಕಾರ್ಯನಿರ್ವಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.