ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಇಂದು ಮತ್ತು ನಾಳೆ ಬ್ಯಾಂಕ್ ನೌಕರರು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸಾರ್ವಜನಿಕ ವಲಯದ ಎರಡು ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಬ್ಯಾಂಕ್ ನೌಕರರ 9 ಸಂಘಟನೆಗಳ ಒಕ್ಕೂಟ (ಯುಎಫ್ಬಿಯು) ಬೆಂಗಳೂರು ಘಟಕದಿಂದ ಮಾರ್ಚ್ 15 ರಿಂದ ಎರಡು ದಿನಗಳ ಮುಷ್ಕರ ನಡೆಸುವುದಾಗಿ ತಿಳಿಸಿದೆ. ಈ ಹಿನ್ನೆಲೆ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಬ್ಯಾಂಕ್ ನೌಕರರು ಯೋಜನೆ ರೂಪಿಸಿಕೊಂಡಿದ್ದು, ಬ್ಯಾಂಕ್ ಬಂದ್ ಬಿಸಿ ಸಾರ್ವಜನಿಕರಿಗೆ ತಟ್ಟಲಿದೆ.
ಮಾ. 13 ಎರಡನೇ ಶನಿವಾರದ ಹಿನ್ನೆಲೆ ಬ್ಯಾಂಕ್ ರಜೆ ಇತ್ತು, 14 ಭಾನುವಾರ ವಾಗಿತ್ತು, ಹಾಗೇಯೇ 15-16 ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಡೆಸಲು ತೀರ್ಮಾನಿಸಿದ್ದರಿಂದ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.