ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ 21 ಪೊಲೀಸರಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ. ಈ ಕುರಿತು ಅಧಿಕೃತವಾಗಿ ಕೇಂದ್ರ ಗೃಹ ಇಲಾಖೆ ಪ್ರಕಟಣೆ ಹೊರಡಿಸಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ.
ಎಡಿಜಿಪಿ ಉಮೇಶ್ ಕುಮಾರ್, ಎಡಿಜಿಪಿ ಅರುಣ್ ಚಕ್ರವರ್ತಿ ಸೇರಿ 21 ಪೊಲೀಸರಿಗೆ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಗೆ ಪದಕ ನೀಡಲಾಗುತ್ತಿದೆ. ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿರುವುದು ಹೆಮ್ಮೆಯ ವಿಷಯ. ಬೆಂಗಳೂರು ನಗರದ ಸಿ.ಐ.ಡಿ ಎಡಿಜಿಪಿ ಉಮೇಶ್ ಕುಮಾರ್, ಬೆಂಗಳೂರು ನಗರದ ಐ.ಎಸ್.ಡಿ ಎಡಿಜಿಪಿ ಅರುಣ್ ಚಕ್ರವರ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
![ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ 21 ಪೊಲೀಸ್ ಸಿಬ್ಬಂದಿ ರಾಷ್ಟ್ರಪತಿ ಪದಕ](https://etvbharatimages.akamaized.net/etvbharat/prod-images/kn-bng-08-president-medal-for-karnataka-21-police-personnel-ka10032_14082021140353_1408f_1628930033_490.jpg)