ETV Bharat / city

ಎಸ್ಸಿ- ಎಸ್ಟಿ ವಿದ್ಯಾರ್ಥಿಗಳ ಟೂಲ್ ಕಿಟ್ ಪೂರೈಕೆಯಲ್ಲಿ 22ಕೋಟಿ ರೂ. ಭ್ರಷ್ಟಾಚಾರ: ಆಪ್​ ಆರೋಪ - ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಟೂಲ್ ಕಿಟ್

ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಟೂಲ್ ಕಿಟ್​ಗೆ ಮಾಡಿರುವ ಟೆಂಡರ್​ನಲ್ಲಿ ಅಕ್ರಮ ನಡೆದಿದೆ. ಈ ಅಕ್ರಮದಲ್ಲಿ ಸಚಿವರು ಭಾಗಿಯಾಗಿದ್ದು, 22 ಕೋಟಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆಮ್​ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷರು ಆರೋಪಿಸಿದ್ದಾರೆ.

allegation
ಮೋಹನ್ ದಾಸರಿ
author img

By

Published : Jul 11, 2022, 6:07 PM IST

ಬೆಂಗಳೂರು: ರಾಜ್ಯದ ಎಲ್ಲ ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ 13 ಸಾವಿರ ವಿದ್ಯಾರ್ಥಿಗಳಿಗೆ 22 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಸಲಕರಣೆಗಳನ್ನು ಒಳಗೊಂಡ ಟೂಲ್ ಕಿಟ್​ಗಳ ಖರೀದಿಯಲ್ಲಿ ಭಾರಿ ಅಕ್ರಮ ನಡೆದಿದೆ. ಇದರಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವ ಸಿ.ಎನ್. ಅಶ್ವತ್ಥ ನಾರಾಯಣ್​ ನೇರ ಹಸ್ತಕ್ಷೇಪ ಇದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಆರೋಪ ಮಾಡಿದ್ದಾರೆ.

ಈ ಕುರಿತು ಪ್ರೆಸ್ ಕ್ಲಬ್ ನಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಆಪ್​ನ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ, ರಾಜ್ಯ ಉದ್ಯೋಗ ಮತ್ತು ಕೈಗಾರಿಕಾ ತರಬೇತಿ ಇಲಾಖೆಯ ಪ.ಜಾ. ವಿಶೇಷ ಘಟಕ ಯೋಜನೆ ಮತ್ತು ಪ.ಪಂ. ಉಪ ಯೋಜನೆಯ ಅನುದಾನದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಟೂಲ್ ಕಿಟ್ ಟೆಂಡರ್​ನಲ್ಲಿ ಭಾಗವಹಿಸಿದ್ದ ಇಂಟಲೆಕ್ ಸಿಸ್ಟಮ್ಸ್ ಸಂಸ್ಥೆಯು ಇಲಾಖೆಗೆ ನೀಡಿರುವ ನಕಲಿ ದಾಖಲೆ ನೀಡಿ ತಾಂತ್ರಿಕ ಅನುಮೋದನೆಯನ್ನು ಪಡೆದುಕೊಂಡಿದೆ.

ಸಚಿವರ ಒತ್ತಡ ಹಾಗೂ ನೇರ ಹಸ್ತಕ್ಷೇಪದಿಂದಾಗಿ ಬೋಗಸ್ ಕಂಪನಿಯೊಂದು 22 ಕೋಟಿ ಮೊತ್ತದ ಸಾಮಗ್ರಿಗಳನ್ನು ಪೂರೈಸಲು ಅನುಮತಿ ನೀಡಿರುವುದು ರಾಜ್ಯ ಬಿಜೆಪಿ ಸರ್ಕಾರದ ಶೇ 40 ರಷ್ಟು ಕಮಿಷನ್ ಭ್ರಷ್ಟಾಚಾರಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮೋಹನ್ ದಾಸರಿ ಆರೋಪಿಸಿದರು.

ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಟೂಲ್ ಕಿಟ್ ಪೂರೈಕೆಯಲ್ಲಿ 22ಕೋಟಿ ಭ್ರಷ್ಟಾಚಾರ

ಜಿ.ಎಸ್.ಟಿ ಬಿಲ್​ಗಳು ನಕಲಿ: ಇಂಟಲೆಕ್ ಸಿಸ್ಟಮ್ಸ್ ಸಂಸ್ಥೆಯು ಈ ಹಿಂದೆ ಬೇರೆಯವರಿಗೆ 22 ಕೋಟಿ ಮತ್ತು 11 ಕೋಟಿ ರೂಪಾಯಿ ಮೊತ್ತದ ಸಾಮಗ್ರಿಗಳನ್ನು ಪೂರೈಸಿರುವ ಬಗ್ಗೆ ಬಿಲ್​ ನೀಡಿದೆ. ಈ ಬಿಲ್​ ನಕಲಿ ಎಂದು ಜಿಎಸ್​ಟಿ ಮಂಡಳಿ ರುಜುವಾತು ಮಾಡಿದೆ. ಅಲ್ಲದೇ 2021 ರ ಸೆಪ್ಟಂಬರ್​ನ ಮಂತ್ರಿ ಮಂಡಲದ ಸಭೆಯಲ್ಲಿ ಈ ಯೋಜನೆಗೆ 17 ಕೋಟಿ ರೂಪಾಯಿ ಮೀಸಲಿಟ್ಟಿದ್ದರು. ಆದರೆ, ಟೆಂಡರ್​ನಲ್ಲಿ ಈ ಮೊತ್ತ 22 ಕೋಟಿಗೆ ಹೆಚ್ಚಾಗಿದೆ. ಈ ವಿಚಾರದಲ್ಲಿ ಸಚಿವ ಅಶ್ವತ್ಥ್ ನಾರಾಯಣ್​ ಮತ್ತು ಅಧಿಕಾರಿಗಳು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಮೋಹನ್ ದಾಸರಿ ದೂರಿದರು.

ಸಚಿವರ ಮನೆಯ ಮುಂದೆ ಪ್ರತಿಭಟನೆ: ಸರ್ಕಾರ ಈ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಸಚಿವ ಅಶ್ವತ್ಥನಾರಾಯಣ್​ ಮನೆ ಮುಂದೆ ವಿದ್ಯಾರ್ಥಿಗಳ ಜೊತೆಗೆ ಆಮ್ ಆದ್ಮಿ ಪಕ್ಷವು ಬೃಹತ್ ಮಟ್ಟದ ಹೋರಾಟವನ್ನು ನಡೆಸಲಿದೆ ಎಂದು ಸರ್ಕಾರವನ್ನು ಎಚ್ಚರಿಸಿದರು. ಮಾಧ್ಯಮಗೋಷ್ಟಿಯಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಚನ್ನಪ್ಪಗೌಡ ನೆಲ್ಲೂರು ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ: ಎಸ್ಸಿ- ಎಸ್ಟಿ ಸಮುದಾಯಗಳಿಗೆ ಮೀಸಲು ಹೆಚ್ಚಳಕ್ಕೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.