ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಫ್ರಾನ್ಸ್ ದೇಶಕ್ಕೆ ಏರ್ ಲಿಫ್ಟ್ ಮಾಡಲಾಗಿದೆ. ಸುಮಾರು 250 ಪ್ರಯಾಣಿಕರು ಫ್ರಾನ್ಸ್ಗೆ ಗುರುವಾರ ತಡರಾತ್ರಿ 1.30ಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಏರ್ ಫ್ರಾನ್ಸ್ ವಿಮಾನದ ಮೂಲಕ ಈ ಪ್ರಯಾಣಿಕರನ್ನ ಏರ್ ಲಿಫ್ಟ್ ಮಾಡಲಾಗಿದೆ. ಲಾಕ್ಡೌನ್ ನಿಂದಾಗಿ ಕರ್ನಾಟಕದಲ್ಲಿ ಸಿಲುಕಿಕೊಂಡಿದ್ದ ಫ್ರಾನ್ಸ್ ಪ್ರಯಾಣಿಕರಿಗೆ ಏರ್ ಲಿಫ್ಟ್ ಮೂಲಕ ತಮ್ಮ ತಾಯ್ನಾಡಿಗೆ ಮರಳುವ ಅವಕಾಶವನ್ನು ಸರ್ಕಾರ ಮಾಡಿಕೊಟ್ಟಿದೆ.
ಇದರಿಂದಾಗಿ ಕರ್ನಾಟಕದಲ್ಲಿ ಸಿಲುಕಿಕೊಂಡಿದ್ದ ಫ್ರಾನ್ಸ್ನ ಪ್ರಜೆಗಳು ಖುಷಿಯಾಗಿ ತಮ್ಮ ದೇಶಕ್ಕೆ ಹಿಂತಿರುಗಿದ್ದಾರೆ.