ಬೆಂಗಳೂರು: ರಾಜ್ಯದಲ್ಲಿಂದು 2,848 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 67 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದು 5,631 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 41,996 ಇದೆ. ಈವರೆಗೆ ಒಟ್ಟು 27,79,038 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 2,848 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 35,434 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 520 ಮಂದಿಗೆ ಸೊಂಕು ತಗುಲಿದ್ದು 7 ಮಂದಿ ಮೃತಪಟ್ಟಿದ್ದಾರೆ. 15,395 ಸಕ್ರಿಯ ಪ್ರಕರಣಗಳಿವೆ. ಇನ್ನು ರಾಜ್ಯದಲ್ಲಿ ಮೃತಪಡುತ್ತಿರುವವರ ಪ್ರಮಾಣ 2.35% ಇದ್ದು, ಸೋಂಕಿತರ ಪ್ರಮಾಣ 1.94% ಕ್ಕೆ ಏರಿಕೆಯಾಗಿದೆ.