ETV Bharat / city

ವಿಧಾನ ಪರಿಷತ್​​​ನ ಉಪ ಸಭಾಪತಿ ಸ್ಥಾನಕ್ಕೆ ಜ.29ರಂದು ಚುನಾವಣೆ - ಉಪ ಸಭಾಪತಿಯಾಗಿದ್ದ ಜೆಡಿಎಸ್​ನ ಧರ್ಮೇಗೌಡ ನಿಧನ

ಉಪ ಸಭಾಪತಿಯಾಗಿದ್ದ ಜೆಡಿಎಸ್​ನ ಧರ್ಮೇಗೌಡ ಅವರ ಅಕಾಲಿಕ ನಿಧನದಿಂದ ಈ ಸ್ಥಾನ ತೆರವಾಗಿತ್ತು. ಜ.28ರಿಂದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 29ರಂದು ಉಪ ಸಭಾಪತಿ ಸ್ಥಾನಕ್ಕೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿದೆ.

Karnataka Legislative Council
ವಿಧಾನ ಪರಿಷತ್​​​
author img

By

Published : Jan 19, 2021, 10:52 PM IST

ಬೆಂಗಳೂರು: ವಿಧಾನ ಪರಿಷತ್​​ನ ಉಪ ಸಭಾಪತಿ ಸ್ಥಾನಕ್ಕೆ ಜನವರಿ 29ರಂದು ಚುನಾವಣೆ ನಡೆಯಲಿದೆ. ವಿಧಾನ ಪರಿಷತ್ತಿನ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 8(1)ರ ಅನ್ವಯ ಉಪ ಸಭಾಪತಿಯವರ ಸ್ಥಾನಕ್ಕೆ ಚುನಾವಣೆಯನ್ನು ಸಭಾಪತಿಯವರು ಜ.29ರಂದು ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ.

ಈ ಕುರಿತು ವಿಧಾನ ಪರಿಷತ್​ನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರು ಪ್ರಕಟಣೆ ಹೊರಡಿಸಿದ್ದಾರೆ. ಜ.28ರ ಮಧ್ಯಾಹ್ನ 3 ಗಂಟೆಯೊಳಗೆ ಉಪ ಸಭಾಪತಿಯನ್ನು ಆರಿಸುವ ಬಗ್ಗೆ ಕಾರ್ಯದರ್ಶಿಯವರಿಗೆ ಹೆಸರಿಸಿ ಕೊಠಡಿ ಸಂಖ್ಯೆ: 156-ಸಿ, ವಿಧಾನಸೌಧದ ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು ಇಲ್ಲಿ ಲಿಖಿತ ಮೂಲಕ ಸೂಚನೆಯನ್ನು ಅಭ್ಯರ್ಥಿಯು ಅವರ ಹೆಸರನ್ನು ಸೂಚಿಸುವವರೊಂದಿಗೆ ಅಥವಾ ಅನುಮೋದಕರೊಂದಿಗೆ ಖುದ್ದಾಗಿ ಸಲ್ಲಿಸಬೇಕು.

ಇದನ್ನೂ ಓದಿ: ರಾಜಕೀಯ ತಿರುವು ಪಡೆದುಕೊಂಡ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಪ್ರಕರಣ..!

ಆ ಸೂಚನೆಯು ಮೂರನೇ ಸದಸ್ಯರಿಂದ ಅನುಮೋದಿಸುವುದು ಮತ್ತು ಯಾವ ಸದಸ್ಯರ ಹೆಸರು ಸೂಚಿತವಾಗಿದೆಯೋ ಅವರು ತಾವು ಉಪ ಸಭಾಪತಿಯಾಗಿ ಚುನಾಯಿತರಾದಲ್ಲಿ, ಉಪ ಸಭಾಪತಿಯಾಗಿ ಸೇವೆ ಸಲ್ಲಿಸಲು ಒಪ್ಪಿರುವರೆಂದು ತಿಳಿಸುವ ಹೇಳಿಕೆಯನ್ನು ಸೂಚನೆಗೆ ಲಗತ್ತಿಸಬೇಕು.

ಯಾವೊಬ್ಬ ಸದಸ್ಯ ತನ್ನ ಹೆಸರನ್ನು ತಾನೇ ಸೂಚಿಸತಕ್ಕದ್ದಲ್ಲ ಅಥವಾ ತನ್ನ ಹೆಸರನ್ನು ಸೂಚಿಸುವ ಯಾವುದೇ ಪ್ರಸ್ತಾವವನ್ನು ಅನುಮೋದಿಸತಕ್ಕದ್ದಲ್ಲ ಅಥವಾ ಒಂದಕ್ಕಿಂತ ಹೆಚ್ಚು ಪ್ರಸ್ತಾವಗಳನ್ನು ಸೂಚಿಸತಕ್ಕದ್ದಲ್ಲ ಮತ್ತು ಅನುಮೋದಿಸತಕ್ಕದ್ದಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉಪ ಸಭಾಪತಿಯಾಗಿದ್ದ ಜೆಡಿಎಸ್​ನ ಧರ್ಮೇಗೌಡ ಅವರು ಅಕಾಲಿಕ ನಿಧನದಿಂದ ಈ ಸ್ಥಾನ ತೆರವಾಗಿತ್ತು. ಜ.28ರಿಂದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 29ರಂದು ಉಪ ಸಭಾಪತಿ ಸ್ಥಾನಕ್ಕೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.