ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಾಜ್ಯದ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಂಡವರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡಲಾಗಿದೆ.
ಅದರಂತೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನವೆಂಬರ್ 2 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ಪರೀಕ್ಷೆಯ ಹಾಗೂ ಅದರ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅರ್ಜಿ ಅಥವಾ ಹಿಂದಿನ ಎಂಸಿಎ (Marks Card Cum Application) ಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಕಟ್ಟಿಸಿಕೊಂಡು ಇಲಾಖಾ Online Portalನಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ತುಂಬುವಂತೆ ಆದೇಶಿಸಿದೆ.
ಸೆಪ್ಟೆಂಬರ್ 2020ರ ಫಲಿತಾಂಶದಲ್ಲಿ ಹಾಗೂ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಫಲಿತಾಂಶ ತಿರಸ್ಕರಿಸಿ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲು ಇಚ್ಛಿಸಿದ್ದಲ್ಲಿ, ಅಂತಹ ವಿದ್ಯಾರ್ಥಿಗಳು ಮೂಲ ಅಂಕಪಟ್ಟಿಗಳ (Original Marks Card) ಆಧಾರದ ಮೇಲೆ ನಿಯಮಾನುಸಾರ ಫಲಿತಾಂಶ ತಿರಸ್ಕರಣೆಗೆ ಅವಕಾಶ ನೀಡಲು ಅರ್ಜಿಯನ್ನು ಇಲಾಖೆಗೆ ಸಲ್ಲಿಸುವಂತೆ ಸೂಚಿಸಿದೆ.
ವಿಶೇಷ ಸೂಚನೆ
1. 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರೆಗ್ಯೂಲರ್ ಅಥವಾ ರಿಪೀಟರ್ ಅಭ್ಯರ್ಥಿಗಳಾಗಿ ಹಾಜರಾಗುವವರು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನೋಂದಾಯಿಸಿದ್ದಲ್ಲಿ ಪ್ರಾಂಶುಪಾಲರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಹಾಗೂ ವಿದ್ಯಾರ್ಥಿಯ ನೋಂದಣಿಯನ್ನು ರದ್ದುಗೊಳಿಸಲಾಗುವುದು
2. ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅರ್ಹವಲ್ಲದ ಅರ್ಜಿಯನ್ನು ಇಲಾಖೆಯು ತಿರಸ್ಕರಿಸಿದಲ್ಲಿ ಪಾವತಿಸಿರುವ ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ. ಇದಕ್ಕೆ ಪ್ರಾಂಶುಪಾಲರೇ ನೇರ ಜವಾಬ್ದಾರರಾಗುವರು ಮತ್ತು ಅವರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು
3. ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳುವಾಗ, ಇಲಾಖೆ ನಿಗದಿಪಡಿಸಿರುವ ವಿಷಯಗಳನ್ನು ಮಾತ್ರ ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳುವಂತೆ ಪ್ರಾಂಶುಪಾಲರು ಜವಾಬ್ದಾರಿ ವಹಿಸಬೇಕು
4. ಭರ್ತಿ ಮಾಡಿದ ಅರ್ಜಿಗಳನ್ನು ಮತ್ತು ಸಂಬಂಧಿಸಿದ ದಾಖಲೆಗಳನ್ನು ನಿಗಧಿತ ದಿನಾಂಕದಂದು ಜಿಲ್ಲಾ ಉಪನಿರ್ದೇಶಕರ ಕಛೇರಿಗೆ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರು/ಸಿಬ್ಬಂದಿಯವರು ನೇರವಾಗಿಸಲ್ಲಿಸಬೇಕು ಹಾಗೂ ಸಲ್ಲಿಸಿದ ದಾಖಲೆಗಳಿಗೆ ಸ್ವೀಕೃತಿ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ.
5. ಖಾಸಗಿ ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡ ಭಾಷಾ ಮತ್ತು ಐಚ್ಛಿಕ ವಿಷಯಗಳ ಬಗ್ಗೆ ಒಂದು ಪ್ರತ್ಯೇಕ ಮುಚ್ಚಳಿಕೆ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ. ಇದೊಂದು ಪ್ರಮುಖ ದಾಖಲೆಯಾಗಿದ್ದು, ಅರ್ಜಿಗಳ ಜೊತೆಯಲ್ಲಿಡುವುದು
6. ಖಾಸಗಿ ಅಭ್ಯರ್ಥಿಗಳು ಅರ್ಜಿ ಮತ್ತು ಮುಚ್ಚಳಿಕೆ ಪತ್ರದಲ್ಲಿ ನಮೂದಿಸಿರುವ ಭಾಷಾ ಮತ್ತು ಐಚ್ಛಿಕ ವಿಷಯಗಳಲ್ಲಿ ಮಾತ್ರ ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿರುತ್ತದೆ. ಆಯ್ಕೆ ಮಾಡಿಕೊಂಡ ನಂತರ ಯಾವುದೇ ಕಾರಣಕ್ಕೂ ಭಾಷಾ ಮತ್ತು ಐಚ್ಛಿಕ ವಿಷಯಗಳ ಬದಲಾವಣೆಗೆ ಅವಕಾಶ ಇರುವುದಿಲ್ಲ.
ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಇರುವ ನಿಬಂಧನೆಗಳು
1. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗೆ ನೋಂದಾಯಿಸಿಕೊಂಡಿರುವ ಕಾಲೇಜು ಅಥವಾ ಇತರೆ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವಂತೆ ಸೂಚಿಸಲಾಗುವುದು
2. ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಂಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಕಳುಹಿಸಲಾಗುವುದು.
ಅರ್ಜಿ ಸಲ್ಲಿಸಲು ದಿನಾಂಕ: ಅಭ್ಯರ್ಥಿಗಳು ಕಾಲೇಜಿಗೆ ಶುಲ್ಕ ಪಾವತಿಸಲು(ದಂಡ ಶುಲ್ಕವಿಲ್ಲದೇ)02-11-2021 ರಿಂದ 27-11-2021 ರವರೆಗೆ ದಂಡ ಶುಲ್ಕದೊಂದಿಗೆ ರಜಾ ದಿನಗಳನ್ನು ಹೊರತುಪಡಿಸಿ ಪರೀಕ್ಷಾ ಶುಲ್ಕದ ಜೊತೆಗೆ ದಿನವೊಂದಕ್ಕೆ ರೂ 50-00 ರಂತೆ ಗರಿಷ್ಠ ರೂ. 500-00 29-11-2021 ರಿಂದ 09-12-2021ರವರೆಗೆ