ETV Bharat / city

ಏ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ‌ : KSRTC ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ - puc exam 2022

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ..

KSRTC
KSRTC
author img

By

Published : Apr 16, 2022, 6:52 PM IST

Updated : Apr 18, 2022, 12:12 PM IST

ಬೆಂಗಳೂರು : ಪ್ರತಿ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಕೆಎಸ್ಆರ್​​ಟಿಸಿ ನಿಗಮ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುತ್ತಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಸಾರಿಗೆ ಸಂಸ್ಥೆ ಅವಕಾಶ ನೀಡಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಲಾಗಿದೆ. ಈ ಸಂಬಂಧ ನಿಗಮದ ಎಲ್ಲಾ ಚಾಲಕ, ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.

ಅಷ್ಟೇ ಅಲ್ಲ, ಪ್ರವೇಶ ಪತ್ರದ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು ಬಸ್‌ ಹತ್ತಲು/ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. (ಇದನ್ನೂ ಓದಿ: 2022ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ)

Last Updated : Apr 18, 2022, 12:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.