ETV Bharat / city

ಯೂಟ್ಯೂಬ್ ನೋಡಿ ಬೈಕ್ ಕಳ್ಳತನ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ- ಮೂವರು ಅಂದರ್​!

ಬೈಕ್ ಕಳ್ಳತನ ಮಾಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

author img

By

Published : Oct 2, 2021, 2:18 PM IST

bangalore  bike theft case
ಬೆಂಗಳೂರು ಬೈಕ್​ ಕಳ್ಳತನ ಪ್ರಕರಣ

ಬೆಂಗಳೂರು: ಯೂಟ್ಯೂಬ್ ನೋಡಿ ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ನಗರದಲ್ಲಿ ಸದೆ ಬಡಿಯಲಾಗಿದೆ. ಹ್ಯಾಂಡ್ ಲಾಕ್ ಮುರಿದು ಕ್ಷಣ ಮಾತ್ರದಲ್ಲಿ ಬೈಕ್ ಎಗರಿಸುತ್ತಿದ್ದ ಖದೀಮರನ್ನು ಪೊಲೀಸರು ಹೆಡೆ ಮುರಿಕಟ್ಟಿದ್ದಾರೆ.

ಬೆಂಗಳೂರು ಬೈಕ್​ ಕಳ್ಳತನ ಪ್ರಕರಣ

ರಾಜಧಾನಿಯ ಬ್ಯಾಟರಾಯನಪುರ, ಹಲಸೂರುಗೇಟ್ ಠಾಣಾ ವ್ಯಾಪ್ತಿಯಲ್ಲಿ ಈ ಗ್ಯಾಂಗ್​ ಕಳ್ಳತನ ಮಾಡುತ್ತಿತ್ತು. ಮನೆ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸುವ ಬೈಕ್​ಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು ಎನ್ನುವ ಮಾಹಿತಿ ದೊರೆತಿದೆ. ಈ ಬೈಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಾಹನ ಕಳ್ಳತನ ಮಾಡುವುದು ಹೇಗೆ ಎಂದು ಯೂಟ್ಯೂಬ್​​ನಲ್ಲಿ ಸರ್ಚ್ ಮಾಡಿ ಮಾಹಿತಿ ಸಂಗ್ರಹಿಸುತ್ತಿದ್ದ ಆರೋಪಿಗಳು, ಬಳಿಕ ತಮ್ಮ ಕೈಚಳಕ ತೋರಿಸುತ್ತಿದ್ದರು.

ಇದನ್ನೂ ಓದಿ: ರಾಷ್ಟ್ರಪತಿ ಭೇಟಿ ಹಿನ್ನೆಲೆ ಹಳೆ ರಸ್ತೆಗೆ ಹೊಸ ಬಣ್ಣ..PWD ವಿರುದ್ಧ ಸಾರ್ವಜನಿಕರ ಆಕ್ರೋಶ

ಇದೀಗ ಹಲಸೂರು ಗೇಟ್ ಪೊಲೀಸರು ಮೂವರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. 8 ಬೈಕ್​​ಗಳನ್ನು ವಶಕ್ಕೆ ಪಡೆದಿದ್ದಾರೆ. ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟು ಮಂದಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿ ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.