ETV Bharat / city

ಖಾಸಗಿ ಶಾಲೆಗಳ 30% ಶುಲ್ಕ ಕಡಿತ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - 30% fee reduction for private

ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ ಆಫ್ ಪ್ರೈಮರಿ ಅಂಡ್ ಸೆಕೆಂಡರಿ ಸ್ಕೂಲ್ಸ್ ಇನ್ ಕರ್ನಾಟಕ (KAMS) ಸಂಘಟನೆ ಹಾಗೂ 5 ಖಾಸಗಿ ಶಾಲೆಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಹೈಕೋರ್ಟ್ ನೋಟಿಸ್
ಹೈಕೋರ್ಟ್ ನೋಟಿಸ್
author img

By

Published : Feb 24, 2021, 10:02 PM IST

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಪೋಷಕರಿಗೆ ಹೊರೆಯಾಗಬಾರದು ಎಂದು ಖಾಸಗಿ ಶಾಲೆಗಳ ಶೇ. 30ರಷ್ಟು ಶುಲ್ಕ ಕಡಿತ ಮಾಡಿ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ ಆಫ್ ಪ್ರೈಮರಿ ಅಂಡ್ ಸೆಕೆಂಡರಿ ಸ್ಕೂಲ್ಸ್ ಇನ್ ಕರ್ನಾಟಕ (KAMS) ಸಂಘಟನೆ ಹಾಗೂ 5 ಖಾಸಗಿ ಶಾಲೆಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ಅವರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮಾರ್ಚ್ 1ಕ್ಕೆ ಮುಂದೂಡಿತು.

ಅರ್ಜಿದಾರರ ಕೋರಿಕೆ: ಲಾಕ್​​ಡೌನ್ ಬಳಿಕ ಇತರೆ ಕ್ಷೇತ್ರಗಳಂತೆಯೇ ಖಾಸಗಿ ಶಿಕ್ಷಣ ಸಂಸ್ಥೆಗಳೂ ಕೂಡ ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕಾಮ್ಸ್ ಸಂಘಟನೆ ಅಡಿಯಲ್ಲಿ ರಾಜ್ಯದಾದ್ಯಂತ 3,655 ಖಾಸಗಿ ಅನುದಾನ ರಹಿತ ಶಾಲೆಗಳಿದ್ದು, ಇಲ್ಲಿ 55 ಸಾವಿರ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಈ ಶಾಲೆಗಳಲ್ಲಿ 15 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಶಿಕ್ಷಣ ಇಲಾಖೆ 2020ರ ಮಾರ್ಚ್ 30ರಂದು ಹೊರಡಿಸಿದ ಆದೇಶದಂತೆ 2020-2021ನೇ ಸಾಲಿನಲ್ಲಿ ಯಾವುದೇ ದಾಖಲಾತಿ ಮಾಡಿಕೊಂಡಿಲ್ಲ. ವಿದ್ಯಾರ್ಥಿಗಳಿಂದ ಶುಲ್ಕ ಕೂಡ ಸಂಗ್ರಹಿಸಿಲ್ಲ. ಹೀಗಾಗಿ ಶಾಲೆಗಳ ನಿರ್ವಹಣೆ ಅತ್ಯಂತ ಕಷ್ಟವಾಗಿದೆ. ಶಾಲೆಗಳ ಶಿಕ್ಷಕರಿಗೆ, ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗಿಲ್ಲ.

2021ರ ಜನವರಿ 29ರಂದು ಶಿಕ್ಷಣ ಇಲಾಖೆ ಭೋದನಾ ಶುಲ್ಕದಲ್ಲಿ ಶೇ. 30ರಷ್ಟು ಕಡಿತ ಮಾಡಿ ಶೇ. 70ರಷ್ಟನ್ನು ಮಾತ್ರ ಶುಲ್ಕ ಸಂಗ್ರಹಿಸುವಂತೆ ಹಾಗೂ ಬೇರಾವುದೇ ಶುಲ್ಕ ಸಂಗ್ರಹಿಸದಂತೆ ಆದೇಶ ಹೊರಡಿಸಿದೆ. ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿಪಡಿಸುವ ಅಧಿಕಾರ ಸರ್ಕಾರಕ್ಕಿಲ್ಲ. ಆದ್ದರಿಂದ ಸರ್ಕಾರದ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.