ಬೆಂಗಳೂರು: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ ಕಂಪನಿ ಉದ್ಯೋಗಿಗಳನ್ನು ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಅರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹರಿಕೃಷ್ಣ, ಮೊಹಮ್ಮದ್, ಹರಿಶಂಕರ್, ರಾಹುಲ್ ಬಂಧಿತ ಅರೋಪಿಗಳು. ಇವರು ಕಾಲೇಜು ಹಾಗೂ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಗಾಂಜಾ ಸರಬರಾಜು ಮಾಡುವುದನ್ನೇ ಕಸಬಾಗಿಸಿಕೊಂಡು ಕೆ.ಆರ್ ಪುರಂ ಸೇರಿದಂತೆ ಇತರೆ ಕಾಲೇಜುಗಳ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು.
ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ನಾಲ್ವರನ್ನು ಬಂಧಿಸಿ, 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಗಾಂಜಾ, ಹ್ಯಾಶಿಶ್ ಆಯಿಲ್ ಅನ್ನು ಆಂಧ್ರಪ್ರದೇಶದ ವಿಶಾಖಾಪಟ್ಟಣದಿಂದ ಬಸ್ನಲ್ಲಿ ತಂದು ಮಾರಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.