ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಮೈಸೂರಿನ ಬೆಟಾಲಿಯನ್ 179 ಕೆಎಸ್ಆರ್ಪಿಯ 42 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಕೊರೊನಾ ಸೋಂಕು ಕಾಣಿಸಿಕೊಂಡ 42 ಕೆಎಸ್ಆರ್ಪಿ ಪೊಲೀಸರಲ್ಲಿ ಸೋಂಕು ಸೌಮ್ಯ ಸ್ವಭಾವದ್ದಾಗಿದೆ. ಎಲ್ಲಾ ಸಿಬ್ಬಂದಿ ಹೋಮ್ ಕ್ವಾರಂಟೈನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಪೊಲೀಸ್ ಮೀಸಲು ಪಡೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಕಾನಕ್ಕಾಗಿ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟಿನಿಂದ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಅಹಿತಕರ ಘಟನೆ ನಡೆಯದಂತೆ ಮೈಸೂರು ವಿಭಾಗದ 179 ಮಂದಿ ಕೆಎಸ್ಆರ್ಪಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಈ ಪೈಕಿ 42 ಸಿಬ್ಬಂದಿಗೆ ಕೊರೊನಾ ವೈರಾಣು ದೃಢವಾಗಿದ್ದು, ಎಲ್ಲರನ್ನೂ ಐಸೋಲೇಷನ್ಗೆ ಒಳಪಡಿಸಲಾಗಿದೆ. ಪಾದಯಾತ್ರೆ ಸಂಬಂಧ ಹೈಕೋರ್ಟ್ ಕೆಪಿಸಿಸಿಗೆ ಚಾಟಿ ಬೀಸಿದ್ದರಿಂದ ಐದನೇ ದಿನಕ್ಕೆ ಅದನ್ನು ಮೊಟಕಗೊಳಿಸಲಾಗಿತ್ತು. ಕೊರೊನಾ ನಿಯಮ ಗಾಳಿಗೆ ತೂರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಕನಕಪುರ ಹಾಗೂ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: ಜನರಿಗೆ ಕಷ್ಟ ಕೊಡುವುದು ನಮ್ಮ ಉದ್ದೇಶವಲ್ಲ, ವೀಕೆಂಡ್ ಕರ್ಫ್ಯೂ ವಿನಾಯಿತಿ ಬಗ್ಗೆ ನಾಳೆ ನಿರ್ಧಾರ : ಸುಧಾಕರ್