ETV Bharat / city

ಪ್ರವಾಸೋದ್ಯಮಕ್ಕೆ 500 ಕೋಟಿ ರೂ. ಅನುದಾನ: ಬಜೆಟ್ ಸ್ವಾಗತಿಸಿದ ಸಿ.ಪಿ. ಯೋಗೇಶ್ವರ್ - Budget 2021

ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ ಮತ್ತು ಗಡಿಗಳ ಸಂರಕ್ಷಣೆಗೆ ಒತ್ತು ನೀಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ ಪರವಾಗಿರುವ 2021-22ನೇ ಸಾಲಿನ ಬಜೆಟ್‍ನ್ನು ಸ್ವಾಗತಿಸುತ್ತೇನೆ ಎಂದು ಪತ್ರಿಕಾ ಹೇಳಿಕೆ ಮೂಲಕ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ.

ಸಿ.ಪಿ ಯೋಗೇಶ್ವರ್
ಸಿ.ಪಿ ಯೋಗೇಶ್ವರ್
author img

By

Published : Mar 8, 2021, 4:59 PM IST

ಬೆಂಗಳೂರು: ಒಂದು ರಾಜ್ಯ ಹಲವು ಜಗತ್ತು ಘೋಷವಾಕ್ಯದಂತೆ ರಾಜ್ಯದಲ್ಲಿರುವ ವೈವಿದ್ಯಮಯ ಪ್ರವಾಸಿ ತಾಣಗಳಿಗೆ ಮೂಲಸೌಕರ್ಯ ಒದಗಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ರೂ.500 ಕೋಟಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿರುವುದನ್ನು ನಾನು ಸ್ವಾಗತಿಸಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬೆಂಗಳೂರು ಸುತ್ತಮುತ್ತ ಪ್ರವಾಸಿ ತಾಣಗಳನ್ನು ಗುರುತಿಸಿ ವಾರಾಂತ್ಯ ಪ್ರವಾಸಿ ವೃತ್ತವನ್ನು ಅಭಿವೃದ್ಧಿ ಪಡಿಸುವುದು, ಮೈಸೂರು ಜಿಲ್ಲೆಯ ಕಬಿನಿ ಅಣೆಕಟ್ಟಿನ ಕೆಳಭಾಗದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಉದ್ಯಾನವನ ನಿರ್ಮಾಣ, 320 ಕಿ.ಮೀ ಕಡಲ ತೀರಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಅಂತಾರಾಜ್ಯ ದರ್ಜೆಗೇರಿಸಲು ಕ್ರಮ, ಉಡುಪಿ ಜಿಲ್ಲೆಯ ತ್ರಾಸಿ ಮರವಂತೆ ಮತ್ತು ಒತ್ತಿನೆಣೆ ಕಡಲ ತೀರಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದು ಉತ್ತಮ ಯೋಜನೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸೋಮೇಶ್ವರ ಕಡಲ ತೀರ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಬಿಡುಗಡೆ, ಬಳ್ಳಾರಿಯ ಕುಡುತಿನಿ ಬೂದಿದಿಬ್ಬವನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ, ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿ ನಿರ್ವಹಣೆಯನ್ನು ತೋಟಗಾರಿಕೆ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ ನೀಡಲಾಗಿದ್ದು, ಇವುಗಳನ್ನು ಅಂತಾರಾಷ್ಟ್ರೀಯ ಪರಿಸರ ತಾಣಗಳನ್ನಾಗಿ ಅಭಿವೃದ್ಧಿ, ತದಡಿಯಲ್ಲಿ 1000 ಎಕರೆ ಪ್ರದೇಶದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಪರಿಸರ ಪ್ರವಾಸೋದ್ಯಮ ಉದ್ಯಾನವನ ಅಭಿವೃದ್ಧಿ ಘೋಷಣೆ ಮಾಡಲಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ಸಚಿವ ಸಿ.ಪಿ. ಯೋಗೇಶ್ವರ್ ತಮ್ಮ ಇಲಾಖೆಗೆ ಸಿಕ್ಕಿದ ಅನುದಾನದ ಬಗ್ಗೆ ಮಾಹಿತಿ ನೀಡಿದ್ದಾರೆ.

ತುಮಕೂರಿನಲ್ಲಿ ಶಿವಕುಮಾರ ಸ್ವಾಮೀಜಿ ಮತ್ತು ಉಡುಪಿಯಲ್ಲಿ ಪೇಜಾವರಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಗೌರವಾರ್ಥ ಸ್ಮೃತಿ ವನವನ್ನು ತಲಾ ರೂ.2.00 ಕೋಟಿಗಳ ವೆಚ್ಚದಲ್ಲಿ ನಿರ್ಮಾಣ, ರಾಜ್ಯದ ಪೂರ್ವ ಪ್ರಸ್ಥಭೂಮಿ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ ಲೆಸ್ಸರ್ ಫ್ಲೋರಿಕನ್ ಪಕ್ಷಿ ಪ್ರಬೇಧ ಸಂರಕ್ಷಣೆಗೆ ರೂ.50 ಲಕ್ಷಗಳನ್ನು ಒದಗಿಸುವ ಭರವಸೆ, ಪರಿಸರ ಮಾಲಿನ್ಯ ನಿಯಂತ್ರಣಕ್ಕೂ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ತ್ಯಾಜ್ಯ ಸಂರಕ್ಷಣೆ ಹಾಗೂ ಎಸ್‍.ಟಿ.ಪಿ ಘಟಕಗಳ ಸ್ಥಾಪನೆಗೆ ಹಣವನ್ನು ನೀಡಲಾಗಿದೆ ಎಂದು ಬಜೆಟ್ ಬಗ್ಗೆ ವಿವರಿಸಿದ್ದಾರೆ.

ಒಟ್ಟಾರೆ, ಎಲ್ಲರನ್ನು ಒಳಗೊಂಡ ಅಭಿವೃದ್ಧಿಪರವಾದ ಆಯವ್ಯಯವನ್ನು ಮುಖ್ಯಮಂತ್ರಿಗಳು ಮಂಡಿಸಿದ್ದಾರೆ. ಸಾಮಾಜಿಕ ನ್ಯಾಯದೊಂದಿಗೆ ಸಮ ಸಮಾಜದ ನಿರ್ಮಾಣಕ್ಕೆ ಬುನಾದಿ ಆತ್ಮ ನಿರ್ಭರ ಭಾರತದ ಬೆಳಕಿನಲ್ಲಿ ಸ್ವಾವಲಂಭಿ ಕರ್ನಾಟಕ ರೂಪಿಸಲು ಈ ಬಜೆಟ್ ಸಹಕಾರಿಯಾಗಲಿದೆ. ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ ಮತ್ತು ಗಡಿಗಳ ಸಂರಕ್ಷಣೆಗೆ ಒತ್ತು ನೀಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ ಪರವಾಗಿರುವ 2021-22ನೇ ಸಾಲಿನ ಬಜೆಟ್‍ನ್ನು ಸ್ವಾಗತಿಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಇದು ಆಶಾದಾಯಕ ಬಜೆಟ್ : ಬಿ.ಸಿ ಪಾಟೀಲ್
ಮುಖ್ಯಮಂತ್ರಿ ಬಿಎಸ್​ವೈ ಅವರ ಬಜೆಟ್ ಆಶಾದಾಯಕ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಪ್ರಶಂಸೆ ವ್ಯಕ್ತಪಡಿಸಿದರು. ಈ ವರ್ಷ ಬೆಳೆ ವಿಮೆ ಯೋಜನೆಗೆ 900 ಕೋಟಿ ರೂ., ಮೀಸಲಿಟ್ಟು ಸಾವಯವ ಕೃಷಿ ಉತ್ತೇಜನಕ್ಕೆ ಆದ್ಯತೆ ನೀಡಲಾಗಿದೆ. ಫುಡ್ ಪಾರ್ಕ್ ನಿರ್ಮಾಣ, ಕೃಷಿ ವಿವಿಗಳಲ್ಲಿ ರೈತರ ಮಕ್ಕಳಿಗೆ 40 ರಿಂದ 50ಕ್ಕೆ ಮೀಸಲಾತಿ ಹೆಚ್ಚಳ, ಕಳೆದ ವರ್ಷದ ಯೋಜನೆಯನ್ನೂ ಮುಂದುವರೆಸಲಾಗ್ತಿದೆ ಎಂದು ಕೃಷಿ ಬಜೆಟ್ ಕುರಿತು ಪಾಟೀಲ್ ಹೇಳಿದರು.

ಇದನ್ನೂ ಓದಿ.. ಗಣಿ ಅದಾಲತ್ ಘೋಷಣೆ, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣ ನೀತಿ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.