ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅತಿದೊಡ್ಡ ಮಾದಕ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 35 ವರ್ಷದ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ ಆಕೆಯ ಸೂಟ್ ಕೇಸ್ನ ತಳಭಾಗದಲ್ಲಿ 8 ಕೆ.ಜಿ ಹೆರಾಯಿನ್ ಪತ್ತೆಯಾಗಿದೆ.
ಕಸ್ಟಮ್ಸ್ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಗುದನಾಳದಲ್ಲಿ ಅಡಗಿಸಿಟ್ಟು ಚಿನ್ನ ಸಾಗಾಟ : ವ್ಯಕ್ತಿ ಬಂಧನ