ETV Bharat / city

ವಿದೇಶದಿಂದ ಬೆಂಗಳೂರಿಗೆ ಬರುವವರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯ - ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ವಿದೇಶಿ ಪ್ರಯಾಣಿಕರಲ್ಲಿ ಹೆಚ್ಚು ಪಾಸಿಟಿವ್​​ ಕೇಸ್​ ಪತ್ತೆಯಾಗುತ್ತಲೇ ಇದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್​​ಗೆ ಒಳಗಾಗುವಂತೆ ಆದೇಶ ಮಾಡಲಾಗಿದೆ.

kempegowda international airport
ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
author img

By

Published : Jan 12, 2022, 10:49 AM IST

ದೇವನಹಳ್ಳಿ(ಬೆಂಗಳೂರು): ವಿದೇಶದಿಂದ ಬರುವ ಪ್ರಯಾಣಿಕರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್​​ಗೆ ಒಳಗಾಗುವಂತೆ ಆದೇಶ ಮಾಡಲಾಗಿದೆ.

ಭಾರತದ ಸರ್ಕಾರದ ಇತ್ತೀಚಿನ ಮಾರ್ಗಸೂಚಿ ಪ್ರಕಾರ ಏರ್​​ಪೋರ್ಟ್ ನಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ. ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ವಿದೇಶಿ ಪ್ರಯಾಣಿಕರಲ್ಲಿ ಹೆಚ್ಚು ಪಾಸಿಟಿವ್​​ ಕೇಸ್​ ಪತ್ತೆಯಾಗುತ್ತಲೇ ಇದೆ. ಈ ಮೊದಲು ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿತ್ತು.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ವಿದೇಶದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್​​ಗೆ ಒಳಗಾಗಬೇಕು. 8ನೇ ದಿನ ಆರ್​​ಟಿಪಿಸಿಆರ್ ಟೆಸ್ಟ್ ವರದಿಯನ್ನ 'ಏರ್ ಸುವಿಧಾ ಪೋರ್ಟಲ್'ಗೆ ಅಪ್ಲೋಡ್​​ ಮಾಡಬೇಕಿದೆ. ಜನವರಿ 11 ರಿಂದ ಈ ಆದೇಶ ಜಾರಿಯಲ್ಲಿದೆ.

ಇದನ್ನೂ ಓದಿ: ಬೂಸ್ಟರ್ ಡೋಸ್ ಯಾವಾಗ ಪಡೆಯಬೇಕೆಂಬ ಗೊಂದಲ ಇದೆಯೇ?: ಹೀಗೆ ಮಾಡಿ..

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.