ETV Bharat / city

80 ಕೋಟಿ ರೂ.ಮೌಲ್ಯದ ಬಿಡಿಎ ಜಾಗ ವಶ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ - ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್

ನಾಗರಭಾವಿಯಲ್ಲಿರುವ ಬಿಡಿಎಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ತಾತ್ಕಾಲಿಕ ಶೆಡ್​ಗಳು, ಗ್ಯಾರೇಜ್​​ಗಳು ಮತ್ತು ಕಾಂಪೌಂಡ್​​ಗಳ ತೆರವುಗೊಳಿಸಿ, ಸುಮಾರು 80 ಕೋಟಿ ರೂಪಾಯಿ ಮೌಲ್ಯದ ಜಾಗ ವಶಕ್ಕೆ ಪಡೆಯಲಾಗಿದೆ.

BDA President SR Vishwanath  BDA President SR Vishwanath
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್
author img

By

Published : Mar 4, 2021, 8:10 AM IST

ಬೆಂಗಳೂರು: ನಾಗರಭಾವಿಯಲ್ಲಿರುವ ಬಿಡಿಎಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ತಾತ್ಕಾಲಿಕ ಶೆಡ್​ಗಳು, ಗ್ಯಾರೇಜ್​​ಗಳು ಮತ್ತು ಕಾಂಪೌಂಡ್​​ಗಳನ್ನು ಬಿಗಿ ಪೊಲೀಸ್ ಬಂದೋಬಸ್ತಿನೊಂದಿಗೆ ತೆರವುಗೊಳಿಸಿದ ಬಿಡಿಎ ಅಧಿಕಾರಿಗಳು ಸುಮಾರು 2 ಎಕರೆ 2 ಗುಂಟೆ ಜಾಗವನ್ನು ವಶಪಡಿಸಿಕೊಂಡಿದ್ದಾರೆ.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್

ಈ ಜಾಗದ ಮೌಲ್ಯ ಸುಮಾರು 80 ಕೋಟಿ ರೂಪಾಯಿಯಾಗಿದೆ. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ಮಹದೇವ್ ಮಾರ್ಗದರ್ಶನದಲ್ಲಿ ಬಿಡಿಎ ಪೊಲೀಸರು, ಸ್ಥಳೀಯ ಠಾಣೆಗಳ ಪೊಲೀಸ್ ಸಿಬ್ಬಂದಿಯ ಭದ್ರತೆಯಲ್ಲಿ ಆರು ಜೆಸಿಬಿಗಳಿಂದ ಶೆಡ್​​ಗಳು, ಮೂರು ಆರ್​ಸಿಸಿ ಕಟ್ಟಡಗಳು ಸೇರಿದಂತೆ ಕಾಂಪೌಂಡ್​​ಗಳನ್ನು ತೆರವುಗೊಳಿಸಿದರು.

ನಾಗರಬಾವಿ ರಿಂಗ್ ರಸ್ತೆಯ ಸಮೀಪವಿರುವ ಸರ್ವೆ ನಂಬರ್ 30ರಲ್ಲಿನ 3 ಎಕರೆ, 5 ಗುಂಟೆ ಜಮೀನನ್ನು ವಶಕ್ಕೆ ತೆಗೆದುಕೊಳ್ಳುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿತ್ತು. ಈ ಪೈಕಿ ಈಗಾಗಲೇ 1 ಎಕರೆ 3 ಗುಂಟೆ ಜಾಗವನ್ನು ರಸ್ತೆ ನಿರ್ಮಾಣಕ್ಕೆ ಎಂದು ಬಳಸಿಕೊಳ್ಳಲಾಗಿದೆ. ಉಳಿದ 2 ಎಕರೆ, 2 ಗುಂಟೆ ಜಾಗದ ವಿಚಾರದಲ್ಲಿ ಕಳೆದ ಹಲವಾರು ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿತ್ತು. ಅಂತಿಮವಾಗಿ ಸುಪ್ರೀಂಕೋರ್ಟ್ ಈ ಜಾಗವನ್ನು ವಶಕ್ಕೆ ತೆಗೆದುಕೊಂಡು ಬಿಡಿಎಗೆ ಹಸ್ತಾಂತರಿಸುವಂತೆ ಮತ್ತು ಸದರಿ ಜಾಗದಲ್ಲಿ ಉದ್ಯಾನ ಹಾಗೂ ಆಟದ ಮೈದಾನ ನಿರ್ಮಾಣ ಮಾಡುವಂತೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಡಿಎ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಾಗದಲ್ಲಿದ್ದ ನಿರ್ಮಿಸಲಾಗಿದ್ದ ಶೆಡ್​ಗಳು ಮತ್ತು ಗುಡಿಸಲುಗಳನ್ನು ತೆರವುಗೊಳಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಡಿಎಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳು ಒತ್ತುವರಿಯಾಗಿವೆ. ಇಂತಹ ಅನೇಕ ಜಾಗಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇದು ಕೇವಲ ಆರಂಭವಷ್ಟೇ. ನಗರದ ಪ್ರತಿಷ್ಠಿತ ಬಡಾವಣೆಗಳಾದ ಜಯನಗರ, ಕೋರಮಂಗಲ, ಪೀಣ್ಯ, ವಿಜಯನಗರ, ಚಂದ್ರಾ ಬಡಾವಣೆ ಸೇರಿದಂತೆ ಇನ್ನಿತರ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಜಾಗಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಜಾಗಗಳನ್ನು ಗುರುತಿಸಿ ಕಾನೂನು ಪ್ರಕಾರ ವಶಕ್ಕೆ ಪಡೆಯಲಾಗುತ್ತದೆ.

ಬಿಡಿಎ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅದಕ್ಕೆ ಜಗ್ಗುವುದಿಲ್ಲ. ಇಂತಹ ಜಾಗಗಳನ್ನು ವಶಪಡಿಸಿಕೊಂಡು ಮುಂದಿನ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗುತ್ತದೆ. ಈಗಾಗಲೇ ಪ್ರತಿಷ್ಠಿತ ಪ್ರದೇಶಗಳಲ್ಲಿ ಒತ್ತುವರಿಯಾಗಿರುವ ನೂರಾರು ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಗುರುತಿಸಲಾಗಿದೆ. ಇವುಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಕಾನೂನು ವಿಭಾಗದ ಸಲಹೆಗಳನ್ನು ಪಡೆಯಲಾಗುತ್ತಿದೆ. ಸಲಹೆಗಳನ್ನು ಪಡೆದ ನಂತರ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಬಿಡಿಎ ಜಾಗವನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ನಗರದ ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳನ್ನು ಪತ್ತೆ ಮಾಡಿದ್ದೇವೆ. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ನಂತರ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತದೆ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.