ETV Bharat / city

ಬಿಬಿಎಂಪಿಗೆ ಗಿವ್ ಇಂಡಿಯಾದಿಂದ 80 ಆಕ್ಸಿಜನ್ ಸಾಂದ್ರಕ, ಬೋಯಿಂಗ್‌ನಿಂದ 450 ಬೆಡ್‌.. - india-for-bbmp-450-bed

ಜಿಕೆವಿಕೆಯ ಕೋವಿಡ್‌ ಕೇರ್‌ ಸೆಂಟರ್‌ನ ಅತ್ಯುತ್ತಮವಾಗಿ ರೂಪಿಸಲಾಗಿದೆ. ಸೋಂಕಿತರು ಇಲ್ಲಿ ಉತ್ತಮ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಡಿಸಿಎಂ ತಿಳಿಸಿದರು..

ಆ್ಯಕ್ಸಿಜನ್ ಸಾಂದ್ರಕ
ಆ್ಯಕ್ಸಿಜನ್ ಸಾಂದ್ರಕ
author img

By

Published : May 8, 2021, 3:11 PM IST

ಬೆಂಗಳೂರು : ಗಿವ್‌ ಇಂಡಿಯಾ ಸಂಸ್ಥೆಯು ಜಿಕೆವಿಕೆ ಕ್ಯಾಂಪಸ್​​​ನಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ 80 ಆಮ್ಲಜನಕ ಸಾಂದ್ರಕ (oxygen concentrator) ಗಳನ್ನು ಶನಿವಾರ ಹಸ್ತಾಂತರ ಮಾಡಿದೆ.

ಸಂಸ್ಥೆಯ ಸಿಇಒ ಅಥುತ್‌ ಸಟೇಜಾ ಅವರು ಆಮ್ಲಜನಕ ಸಾಂದ್ರಕಗಳನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ್ ನಾರಾಯಣ ಅವರಿಗೆ ಜಿಕೆವಿಕೆ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ, ಮುಂದಿನ ದಿನಗಳಲ್ಲಿ ಗಿವ್‌ ಇಂಡಿಯಾ ಸಂಸ್ಥೆ ಇನ್ನೂ 2000 ಆಮ್ಲಜನಕ ಸಾಂದ್ರಕಗಳನ್ನು ನೀಡಲಿದೆ.

ಅವುಗಳನ್ನು ರಾಜ್ಯಾದ್ಯಂತ ಸ್ಥಾಪನೆ ಮಾಡಲಾಗುವ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಅಳವಡಿಸಲಾಗುವುದು. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರಕ್ಕೆ ಖಾಸಗಿ ಕ್ಷೇತ್ರದವರು ನೆರವು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

80-oxygen-compressor-from-give-india-for-bbmp-450-bed-assistance-from-boeing
ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಹಸ್ತಾಂತರ ಮಾಡಲಾಯಿತು

ಬೋಯಿಂಗ್‌ನಿಂದ 450 ಬೆಡ್ : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಡೆಸಿದ ಮಾತುಕತೆ ಫಲವಾಗಿ ಯಲಹಂಕ ಭಾಗದಲ್ಲಿ 200 ಆಕ್ಸಿಜನ್‌ ಬೆಡ್‌ಗಳ ಚಿಕಿತ್ಸಾ ಘಟಕವನ್ನು ಬೋಯಿಂಗ್‌ ಸಂಸ್ಥೆ ಸ್ಥಾಪಿಸಿದೆ.

ಅದು ಲೋಕಾರ್ಪಣೆಗೆ ಸಿದ್ಧವಾಗಿದೆ. ಇನ್ನೂ 250 ಬೆಡ್‌ಗಳನ್ನು ಮಾಡಿಕೊಡಲು ಅದೇ ಸಂಸ್ಥೆ ಮುಂದೆ ಬಂದಿದ್ದು, ಸದ್ಯದಲ್ಲೇ ಕಾರ್ಯಾರಂಭವಾಗಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

ಜಿಕೆವಿಕೆಯ ಕೋವಿಡ್‌ ಕೇರ್‌ ಸೆಂಟರ್‌ನ ಅತ್ಯುತ್ತಮವಾಗಿ ರೂಪಿಸಲಾಗಿದೆ. ಸೋಂಕಿತರು ಇಲ್ಲಿ ಉತ್ತಮ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಡಿಸಿಎಂ ತಿಳಿಸಿದರು.

ಯಲಹಂಕ ಶಾಸಕ ಎಸ್.‌ಆರ್.‌ವಿಶ್ವನಾಥ್‌, ಕರಕುಶಲ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ, ಬಿಬಿಎಂಪಿ ಸಿಎಸ್‌ಆರ್‌ ಸಲಹೆಗಾರ ಕೆ.ವಿ.ಮಹೇಶ್, ಯಲಹಂಕ ವಲಯದ ಪಾಲಿಕೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.