ETV Bharat / city

4 ಕಂಟೈನರ್​ ಮೂಲಕ ಬೆಂಗಳೂರು ತಲುಪಿದ 84.75 ಟನ್ ಆಮ್ಲಜನಕ

author img

By

Published : Jun 4, 2021, 10:01 PM IST

ನಿನ್ನೆ ಬೆಳಗ್ಗೆ 9:10 ಕ್ಕೆ ಗುಜರಾತ್​ನ ಜಾಮ್‌ನಗರದಿಂದ ಆಮ್ಲಜನಕವನ್ನ ಲೋಡ್ ಮಾಡಿಕೊಂಡು ಪ್ರಯಾಣ ಬೆಳೆಸಿತ್ತು. ಈ ರೈಲು ನಾಲ್ಕು ಕ್ರಯೋಜೆನಿಕ್ ಕಂಟೇನರ್‌ಗಳಲ್ಲಿ 84.75 ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಇದೆ.

 ಆಮ್ಲಜನಕ ಪೂರೈಕೆ
ಆಮ್ಲಜನಕ ಪೂರೈಕೆ

ಬೆಂಗಳೂರು: 25 ನೇ ಆಕ್ಸಿಜನ್ ಎಕ್ಸ್‌ಪ್ರೆಸ್ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವೈಟ್‌ಫೀಲ್ಡ್, ಒಳನಾಡಿನ ಕಂಟೈನರ್ ಡಿಪೋವನ್ನು ತಲುಪಿದೆ. ಈ ರೈಲು ನಿನ್ನೆ ಬೆಳಗ್ಗೆ 9:10 ಕ್ಕೆ ಗುಜರಾತ್​ನ ಜಾಮ್‌ನಗರದಿಂದ ಆಮ್ಲಜನಕವನ್ನ ಲೋಡ್ ಮಾಡಿಕೊಂಡು ಪ್ರಯಾಣ ಬೆಳೆಸಿತ್ತು. ಈ ರೈಲು ನಾಲ್ಕು ಕ್ರಯೋಜೆನಿಕ್ ಕಂಟೇನರ್‌ಗಳಲ್ಲಿ 84.75 ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಅನ್ನು ಸಾಗಿಸಿದೆ.

ಬೆಂಗಳೂರಿನ ವೈಟ್ ಫೀಲ್ಡ್​ಗೆ ಬಂದ ರೈಲುಗಳನ್ನು ಮಹಿಳಾ ಸಿಬ್ಬಂದಿ ಚಾಲನೆ ಮಾಡಿದ್ದಾರೆ. ಬೆಂಗಳೂರು ವಿಭಾಗದಲ್ಲಿ ಎಲ್ಲ ಮಹಿಳಾ ಸಿಬ್ಬಂದಿಗಳು ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸುವುದನ್ನು ಮಾನ್ಯ ಪ್ರಧಾನ ಮಂತ್ರಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹೆಮ್ಮೆಯಿಂದ ಘೋಷಿಸಿ ಅಭಿನಂದಿಸಿದ್ದರು.

ಸಾಂಕ್ರಾಮಿಕ ರೋಗದ ಅತ್ಯಂತ ಕಠಿಣ ಹಂತದಲ್ಲಿ ಕರ್ನಾಟಕದಲ್ಲಿ ಆಮ್ಲಜನಕದ ಲಭ್ಯತೆಯನ್ನು ಸುಧಾರಿಸಲು ಈ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲುಗಳು ಪ್ರಮುಖ ಪಾತ್ರ ವಹಿಸಿದೆ.

ಇಲ್ಲಿಯವರೆಗೆ ಕರ್ನಾಟಕವು ರೈಲ್ವೆ ಮೂಲಕ 2869.22 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ಪಡೆದಿದೆ. ಭಾರತೀಯ ರೈಲ್ವೆ ಇದುವರೆಗೆ 350ಕ್ಕೂ ಹೆಚ್ಚು ಆಕ್ಸಿಜನ್ ಎಕ್ಸ್‌ಪ್ರೆಸ್‌ಗಳನ್ನು ನಡೆಸಿದೆ ಮತ್ತು 1438 ಟ್ಯಾಂಕರ್‌ಗಳಿಂದ 24387 ಟನ್‌ಗಳಷ್ಟು ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶಾದ್ಯಂತ ಸಾಗಿಸಿದೆ ಮತ್ತು ಕೋವಿಡ್ -19 ವಿರುದ್ಧದ ಹೋರಾಟದಲ್ಲಿ 15 ರಾಜ್ಯಗಳಿಗೆ ಪರಿಹಾರವನ್ನು ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.