ಬೆಂಗಳೂರು: ಯುದ್ಧಪೀಡಿತ ಉಕ್ರೇನ್ನಲ್ಲಿ ರಾಜ್ಯದ 281 ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಹಾಯವಾಣಿಗೆ ಕರೆಗಳು ಬಂದಿವೆ. ಇಂದು ಬೆಳಗ್ಗೆ 10 ಗಂಟೆವರೆಗೆ ಬಂದ ಕರೆಯ ಆಧಾರದಲ್ಲಿ ರಾಜ್ಯದ ಜಿಲ್ಲಾವಾರು ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿಕೊಂಡಿರುವ ಬಗ್ಗೆ ಪ್ರಾಧಿಕಾರ ಮಾಹಿತಿ ನೀಡಿದೆ.
ಸಹಾಯವಾಣಿಯಿಂದ ಸಂಗ್ರಹಿಸಿದ ಈ ಮಾಹಿತಿಯನ್ನು ವಿದೇಶಾಂಗ ಸಚಿವಾಲಯ ಹಾಗೂ ಉಕ್ರೇನ್ ರಾಜಧಾನಿ ಕಿವ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ರವಾನಿಸಲಾಗಿದೆ. ವಿದ್ಯಾರ್ಥಿಗಳ ರಕ್ಷಣೆ ಹಾಗೂ ಸುರಕ್ಷಿತವಾಗಿ ತವರಿಗೆ ಕರೆ ತರುವ ನಿಟ್ಟಿನಲ್ಲಿ ಸಚಿವಾಲಯದ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ವಿದ್ಯಾರ್ಥಿಗಳು ಸದ್ಯ ಸುರಕ್ಷಿತವಾಗಿದ್ದು, ಯಾವುದೇ ಆತಂಕಪಡುವ ಅಗತ್ಯ ಇಲ್ಲ. ಆದಷ್ಟು ಬೇಗ ಸುರಕ್ಷಿತವಾಗಿ ತಮ್ಮನ್ನು ರಾಜ್ಯಕ್ಕೆ ಕರೆತರಲಾಗುವುದು ಎಂದು ವಿದ್ಯಾರ್ಥಿಗಳಿಗೆ ಅಭಯ ನೀಡಲಾಗಿದೆ. ಕೀವ್ ಭಾರತೀಯ ದೂತಾವಾಸ ಅಧಿಕಾರಿಗಳ ಜೊತೆ ಸಂಪರ್ಕ ಸಾಧಿಸಲಾಗಿದ್ದು, ರಾಜ್ಯದ ವಿದ್ಯಾರ್ಥಿಗಳನ್ನು ತವರಿಗೆ ಕರೆ ತರುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಪಡೆಗಳಿಂದ ಬಾಂಬ್ ದಾಳಿ
ಈಗಾಗಲೇ ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಕ್ಷಿಸಿ, ವಾಪಸು ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಐಎಫ್ಎಸ್ ಅಧಿಕಾರಿ ಮನೋಜ್ ರಾಜನ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ. ನೋಡಲ್ ಅಧಿಕಾರಿ ವಿದೇಶಾಂಗ ಸಚಿವಾಲಯ ಹಾಗೂ ಉಕ್ರೇನ್ ಕಿವ್ನಲ್ಲಿನ ಭಾರತೀಯ ದೂತವಾಸದ ಜೊತೆ ಸಮನ್ವಯ ಸಾಧಿಸಿ, ಸಿಲುಕಿಕೊಂಡಿರುವ ರಾಜ್ಯದ ಜನರನ್ನು ವಾಪಸು ಕರೆತರುವ ಕೆಲಸ ಮಾಡುತ್ತಿದ್ದಾರೆ. ಇತ್ತ ಸಿಎಂ ಕಚೇರಿ ಹಾಗೂ ಮುಖ್ಯ ಕಾರ್ಯದರ್ಶಿಯವರು ವಿದೇಶಾಂಗ ಸಚಿವಾಲಯ ಹಾಗೂ ಭಾರತೀಯ ಕಿವ್ ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
24/7 ಹೆಲ್ಪ್ ಲೈನ್ ಸಂಖ್ಯೆ: 080-1070, 080-22340676
ಇ-ಮೇಲ್ ಐಡಿ: manoarya@gmail.com, revenuedmkar@gmail.com ಮೂಲಕ ಸಂಪರ್ಕಿಸಬಹುದಾಗಿದೆ.
ಉಕ್ರೇನ್ನಲ್ಲಿ ಸಿಲುಕಿದ ವಿದ್ಯಾರ್ಥಿಗಳ ಜಿಲ್ಲಾವಾರು ವಿವರ: