ETV Bharat / city

ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಬೆಂಗಳೂರಲ್ಲಿ ಅರೆಸ್ಟ್ - ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಬಿಪಿನ್ ರಾವತ್ ಬಗ್ಗೆ ಆಕ್ಷೇಪಾರ್ಹ ರೀತಿಯಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಿಡಿಗೇಡಿ ಅರೆಸ್ಟ್,Man Arrest for posting against Bipin Rawat
ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಿಡಿಗೇಡಿ ಅರೆಸ್ಟ್
author img

By

Published : Dec 12, 2021, 5:44 PM IST

ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದ ಸಿಡಿಎಸ್ ಬಿಪಿನ್ ರಾವತ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಟಿ.ಕೆ.ವಸಂತ್ ಕುಮಾರ್ (40) ಬಂಧಿತ ಆರೋಪಿ. ಮೈಸೂರು ಮೂಲದ ವಸಂತ್, ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಕೆಲಸ ಮಾಡುತ್ತಿದ್ದ‌.‌ ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದ ಬಿಪಿನ್ ರಾವತ್ ಅವರ ಬಗ್ಗೆ ತನ್ನ ಫೇಸ್​​ಬುಕ್ ಖಾತೆಯಿಂದ ಆಕ್ಷೇಪಾರ್ಹವಾಗಿ ಪೋಸ್ಟ್ ಮಾಡಿದ್ದ.

ಈ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಐಪಿಸಿ 505 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡ ವಿಧಾನಸೌಧ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆಕ್ಷೇಪಾರ್ಹ ಪೋಸ್ಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಮೊದಲು ಹೇಳಿಕೆ ನೀಡಿದ್ದರು.

(ವೀರ ಪುತ್ರನ​ ಪಾರ್ಥಿವ ಶರೀರದ ಅಂತಿಮ ಯಾತ್ರೆ.. ಮಹಾಯೋಧನಿಗೆ ಶ್ವಾನದಿಂದಲೂ ಗೌರವ!)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.