ಬೆಂಗಳೂರು: ನಗರದಲ್ಲಿ ಮಾದಕ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೋಟು ಬಂಧಿತ ಆರೋಪಿ. ಈತ ಹೊಸಕೋಟೆಯಲ್ಲಿ ಪರಿಚಿತ ಯುವಕರಿಂದ ಗಾಂಜಾ ಖರೀದಿಸಿ ತಂದು ನಗರದಲ್ಲಿ ಗ್ರಾಂ ಗೆ 200 ರಿಂದ 300 ರೂ. ನಂತೆ ಮಾರಾಟ ಮಾಡುತ್ತಿದ್ದ.
ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಮಾದಕ ವಸ್ತು ನಿಗ್ರಹ ದಳದ ಪೊಲೀಸರು ಆರೋಪಿಯನ್ನ ಬಂಧಿಸಿ 3 ಲಕ್ಷ ಮೌಲ್ಯದ 5.30 ಕೆ.ಜಿ ಮಾದಕ ವಸ್ತು, 1ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ಕುರಿತು ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೆ ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಬಂಧನ, ಆಸ್ಯಿಡ್ ಬ್ಯಾನ್ಗೆ ಮುಂದಾದ ಗೃಹ ಸಚಿವರು