ETV Bharat / city

ಬೆಚ್ಚಿಬಿದ್ದ ಸಿಲಿಕಾನ್​ ಸಿಟಿ: ಕಾರಿನಲ್ಲಿ ಕುಳಿತಿದ್ದ ವ್ಯಕ್ತಿಯ ಬರ್ಬರ ಹತ್ಯೆ - ಬೆಂಗಳೂರು ಸುದ್ದಿ

ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ನಿನ್ನೆ ರಾತ್ರಿ ಸ್ವಿಫ್ಟ್ ಕಾರಿನಲ್ಲಿ ಕುಳಿತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.

murder in bengaluru
ವ್ಯಕ್ತಿಯ ಕೊಲೆ
author img

By

Published : Jul 10, 2020, 9:23 AM IST

ಬೆಂಗಳೂರು: ಕಾರಿನಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ.

ಚನ್ನಕೇಶವ ಅಲಿಯಾಸ್ ಕೇಶವ (35) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ತನ್ನ ಸ್ವಿಫ್ಟ್​ ಕಾರಿನಲ್ಲಿ ಕುಳಿತಿರುವಾಗ ನಾಲ್ಕೈದು ದುಷ್ಕರ್ಮಿಗಳ ತಂಡ ಆಗಮಿಸಿ‌ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನಗರದಲ್ಲಿ 8 ಗಂಟೆ ಬಳಿಕ ಯಾರೂ ಓಡಾಡದ ಹಿನ್ನೆಲೆಯಲ್ಲಿ ಕೇಶವ್​ ಸಹಾಯಕ್ಕೆ ಜನರು ಬಂದಿರಲಿಲ್ಲ. ಇನ್ನು ಹಲ್ಲೆ ನಡೆದ ಭೀಕರತೆಗೆ ಕೇಶವ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೊಲೆಗೆ ಹಳೇ ದ್ವೇಷ ಕಾರಣವಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

murder in bengaluru
ವ್ಯಕ್ತಿಯ ಕೊಲೆ

ಇನ್ನು ರಕ್ತದ ಮಡುವಿನಲ್ಲಿ ಬಿದ್ದಿದ್ದ ಕೇಶವ್​ನನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಯಲಹಂಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.