ETV Bharat / city

2,689.51 ಕೋಟಿ ರೂ. ಮೌಲ್ಯದ 81 ಹೊಸ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ: ಸಚಿವ ಮುರುಗೇಶ್ ನಿರಾಣಿ - Minister murugesh R Nirani

151.42 ಕೋಟಿ ರೂ. ಹೂಡಿಕೆಯ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 2,689.51 ಕೋಟಿ ರೂ.ಗಳ ಹೂಡಿಕೆಯೊಂದಿಗೆ 6,825 ಜನರಿಗೆ ಉದ್ಯೋಗಾವಕಾಶ ಇರುವ ಒಟ್ಟು 81 ಯೋಜನೆಗಳಿಗೆ ಅನುಮತಿ ನೀಡಲಾಗಿದೆ.

A state-level unilateral clearance committee meeting was held.
ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ ಸಭೆ ನಡೆಯಿತು.
author img

By

Published : Jun 17, 2022, 12:58 PM IST

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡಿ ಉದ್ಯೋಗಗಳ ಸೃಷ್ಟಿಗೆ ಒತ್ತು ನೀಡಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಸುಮಾರು 6,825ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿಸುವ 2,689.51 ಕೋಟಿ ರೂ. ಮೌಲ್ಯದ 81 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದೆ. ಕರ್ನಾಟಕ ಉದ್ಯೋಗಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್. ನಿರಾಣಿ ನೇತೃತ್ವದಲ್ಲಿ ನಡೆದ 132ನೇ ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ (ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ) ಸಭೆಯು ಈ ಯೋಜನೆಗಳಿಗೆ ಅನುಮೋದನೆ ನೀಡಿದೆ.

ಸಮಿತಿಯು 50 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಯೋಜನೆಗಳನ್ನು ಪರಿಗಣಿಸಿ ಅನುಮೋದನೆ ನೀಡಿದೆ. 1,229.43 ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 1,734 ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ ಸಭೆ ನಡೆಯಿತು.

ಅಲ್ಲದೇ 132ನೇ ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ ಸಭೆಯಲ್ಲಿ 15 ಕೋಟಿ ರೂ.ಗಿಂತ ಹೆಚ್ಚು ಹಾಗೂ 50 ಕೋಟಿ ರೂ.ಗಿಂತ ಕಡಿಮೆ ಹೂಡಿಕೆಯ 71 ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದೆ. ಹಾಗೂ 1,308.06 ಕೋಟಿ ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 5,091 ಜನರಿಗೆ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

151.42 ಕೋಟಿ ರೂ. ಹೂಡಿಕೆಯ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 2,689.51 ಕೋಟಿ ರೂ.ಗಳ ಹೂಡಿಕೆಯೊಂದಿಗೆ 6,825 ಜನರಿಗೆ ಉದ್ಯೋಗಾವಕಾಶ ಇರುವ ಒಟ್ಟು 81 ಯೋಜನೆಗಳಿಗೆ ಅನುಮತಿ ನೀಡಲಾಗಿದೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳು : ಪರ್ಪಲ್‍ಸ್ಟಾರ್ ಹೈಜೀನ್ ಪ್ರೈವೆಟ್ ಲಿಮಿಟೆಡ್ - ಹೂಡಿಕೆ 270 ಕೋಟಿ ರೂ., 400 ಉದ್ಯೋಗ. ಬೆಳಗಾವಿ ಶುಗರ್ಸ್ ಪ್ರೈವೆಟ್ 240.84 ಕೋಟಿ ರೂ. ಹೂಡಿಕೆ, 170 ಉದ್ಯೋಗ. ಪರತ್ಪರ ಕಾಫಿ ಲಿಮಿಟೆಡ್ -236.8 ಕೋಟಿ ರೂ. ಹೂಡಿಕೆ, 200 ಉದ್ಯೋಗ. ಲಾಜಿಕಲಿ ಇನ್ಫೋಮೀಡಿಯಾ ಪ್ರೈವೆಟ್ ಲಿಮಿಟೆಡ್- 228.19 ಕೋಟಿ ರೂ. ಹೂಡಿಕೆ, 614 ಉದ್ಯೋಗ. ಎಎನ್‍ಎಸ್ ಪೇಪರ್ ಪ್ರೈವೆಟ್ ಲಿಮಿಟೆಡ್ -100 ಕೋಟಿ ರೂ. ಹೂಡಿಕೆ, 100 ಮಂದಿಗೆ ಉದ್ಯೋಗ. ಗೋದಾವತ್ ಪುಡ್ ಪ್ರೋ ಪ್ರೈವೆಟ್ ಲಿಮಿಟೆಡ್ -98.60 ಕೋಟಿ ರೂ. ಹೂಡಿಕೆ, ಉದ್ಯೋಗ - 30. ಜ್ಯೋತಿಸ್ನಾ ಲೈ-ಹೈಟೆಕ್ ಪ್ರೈವೆಟ್ ಲಿಮಿಟೆಡ್- 50 ಕೋಟಿ ರೂ. ಹೂಡಿಕೆ, ಜೊತೆಗೆ 220 ಉದ್ಯೋಗ.

ಈ ಹಿಂದೆ ಸಚಿವ ಮುರುಗೇಶ್ ನಿರಾಣಿ ನೇತೃತ್ವದ ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ 2022ರ ಏಪ್ರಿಲ್ 30ರಂದು ನಡೆದ 131ನೇ ಸಭೆಯಲ್ಲಿ 8,575 ಜನರಿಗೆ ಉದ್ಯೋಗಾವಕಾಶದೊಂದಿಗೆ ರೂ 2,465.94 ಕೋಟಿ ಮೌಲ್ಯದ 60 ಕೈಗಾರಿಕಾ ಯೋಜನೆಗಳಿಗೆ ಅನುಮತಿ ನೀಡಿತ್ತು. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕೈಗಾರಿಕಾ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎನ್ ಶಿವಶಂಕರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ಇಂದಿನ ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ನಾಯಕರ ಭೇಟಿ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.