ಬೆಂಗಳೂರು: ವೈಟ್ಫೀಲ್ಡ್ ಬಳಿಯ ಹೂಡಿ ಮಾರ್ಗದಲ್ಲಿ ಸಾಗುತ್ತಿದ್ದ ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಿಗೆ ದಿಗಿಲು ಹುಟ್ಟಿಸಿತು.
ಬಂಗಾರಪೇಟೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತ ಲೋಕೋ ಪೈಲಟ್ ಹೂಡಿ ರೈಲ್ವೆ ಸ್ಟೆಷನ್ ಬಳಿ ರೈಲು ನಿಲ್ಲಿಸಿದರು.
ಏನಾಗುವುದೋ ಎಂದು ಪ್ರಯಾಣಿಕರು ಆತಂಕಗೊಂಡಿದ್ದರು. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಹಠಾತ್ತನೆ ಸಂಭವಿಸಿದ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ.