ETV Bharat / city

ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಆಪ್‌ ಮುಖಂಡರು - ETV Bharath Karnataka

ಕೌಶಲ್ಯಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ರಾಜ್ಯ ಕೈಗಾರಿಕಾ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ 13 ಸಾವಿರ ವಿದ್ಯಾರ್ಥಿಗಳಿಗೆ ಪೂರೈಸಲು 22 ಕೋಟಿ ವೆಚ್ಚದಲ್ಲಿ ಟೂಲ್ ಕಿಟ್ ಖರೀದಿಯಲ್ಲಿ ಸಚಿವ ಅಶ್ವತ್ಥ ನಾರಾಯಣ್ ಅಕ್ರಮ ಎಸಗಿದ್ದಾರೆ ಎಂದು ಆಮ್​ ಆದ್ಮಿ ಪಕ್ಷ ಆರೋಪಿಸಿದೆ.

aam-aadmi-party
ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಆಮ್‌ ಆದ್ಮಿ
author img

By

Published : Aug 2, 2022, 6:33 PM IST

ಬೆಂಗಳೂರು: ಪ.ಜಾ-ಪ.ಪಂ ವಿದ್ಯಾರ್ಥಿಗಳ ಟೂಲ್ ಕಿಟ್ ಪೂರೈಕೆ ಟೆಂಡರ್​​ನಲ್ಲಿ ಬೃಹತ್ ಹಗರಣ ನಡೆದಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಚಿವ ಡಾ.ಅಶ್ವತ್ಥ ನಾರಾಯಣ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದೆ. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ, ಉಪಾಧ್ಯಕ್ಷ ಭಾಸ್ಕರ್ ರಾವ್ ನೇತೃತ್ವದ ನಿಯೋಗ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರನ್ನು ಭೇಟಿ ಮಾಡಿ ದಾಖಲೆಸಮೇತ ದೂರು ನೀಡಿ ನ್ಯಾಯಾಂಗ ತನಿಖೆ ಒಳಪಡಿಸುವಂತೆ ಮನವಿ ಮಾಡಿದರು.

ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಆಮ್‌ ಆದ್ಮಿ

ಕೌಶಲ್ಯಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ರಾಜ್ಯ ಕೈಗಾರಿಕಾ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ 13 ಸಾವಿರ ವಿದ್ಯಾರ್ಥಿಗಳಿಗೆ ಪೂರೈಸಲು 22 ಕೋಟಿ ವೆಚ್ಚದಲ್ಲಿ ಟೂಲ್ ಕಿಟ್ ಖರೀದಿಸುವ ಟೆಂಡರ್​ನಲ್ಲಿ ಹಗರಣ ನಡೆದಿದೆ.‌ ಇದರ ಹಿಂದೆ ಸಚಿವ ಡಾ.ಅಶ್ವತ್ಥ ನಾರಾಯಣ ಅವರ ನೇರ ಕೈವಾಡವಿದೆ. ಅಲ್ಲದೆ ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡಾ ಹಗರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಲಾಗಿದೆ.

40% ಹಗರಣ: ಆಮ್ ಆದ್ಮಿ‌ಪಕ್ಷ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾಧ್ಯಮಗಳ ಜೊತೆ ಮಾತನಾಡಿ, ಟೂಲ್ ಕಿಟ್ ಹಗರಣದಲ್ಲಿ ಭ್ರಷ್ಟಾಚಾರ ನಡೆದಿದೆ. ಫೋರ್ಜರಿ ದಾಖಲೆ ಸೃಷ್ಠಿಸಿ ಟೆಂಡರ್ ಪಡೆದಿರುವ ಇಂಟಲೆಕ್ಟ್ ಸಿಸ್ಟಮ್ಸ್ ಸಂಸ್ಥೆಯು ಈ ಹಿಂದೆ ರಿಜೆಕ್ಟ್ ಅದರೂ ಇದೇ ಕಂಪೆನಿಗೆ ಮರು ಟೆಂಡರ್ ನೀಡಿದೆ. ಅರ್ಹತೆ ಇಲ್ಲದಿದ್ದರೂ ನಕಲಿ ದಾಖಲೆ ನೀಡಿ ತಾಂತ್ರಿಕ ಅನುಮೋದನೆ ಪಡೆದಿದೆ. ಸಚಿವ ಡಾ.ಅಶ್ವತ್ಥ ನಾರಾಯಣ್ ಒತ್ತಡ ಹಾಗೂ ನೇರ ಹಸ್ತಕ್ಷೇಪದಿಂದ ಬೋಗಸ್ ಕಂಪನಿಗೆ 22 ಕೋಟಿ ಮೊತ್ತದ ಟೆಂಡರ್ ನೀಡಲಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಮತ್ತೊಂದು 40% ಹಗರಣ ಎಂದು ಆರೋಪಿಸಿದರು.

ಬೋಗಸ್ ದಾಖಲೆ ಸೃಷ್ಟಿಸಿ ಹಗರಣ: ಮಾಜಿ‌ ಐಪಿಎಸ್ ಅಧಿಕಾರಿ ಹಾಗೂ ಪಕ್ಷದ ಉಪಾಧ್ಯಕ್ಷ ಭಾಸ್ಕರ್ ರಾವ್ ಮಾತನಾಡಿ, ಮೊದಲ ಬಾರಿಗೆ ಟೆಂಡರ್​ನಲ್ಲಿ ಭಾಗಿಯಾಗಿದ್ದ ಇಂಟಲೆಕ್ಟ್ ಸಿಸ್ಟಮ್ಸ್‌ ಕಂಪನಿಗೆ ತಾಂತ್ರಿಕ ಅರ್ಹತೆ ಇಲ್ಲದ ಕಾರಣಕ್ಕಾಗಿ ಮೊದಲ ಬಾರಿ ಈ‌ ಕಂಪನಿಗೆ ಟೆಂಡರ್ ರಿಜೆಕ್ಟ್ ಮಾಡಲಾಗಿತ್ತು. ಬಳಿಕ ಇದೇ ಕಂಪನಿಗೆ ಟೆಂಡರ್ ನೀಡುವ ಸಲುವಾಗಿ ಇಡೀ ಟೆಂಡರ್ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗಿದೆ. ಮರು ಟೆಂಡರ್​ನಲ್ಲಿ ರಿಜೆಕ್ಟ್ ಆದ ಕಂಪನಿ ಬೋಗಸ್ ದಾಖಲೆ ಸೃಷ್ಟಿಸಿಕೊಟ್ಟು ಅದೇ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದರು.

ನಕಲಿ ಬಿಲ್ ಬಿಲ್​ನಿಂದ ಟೆಂಡರ್​ : ಕಂಪನಿ ಈ ಹಿಂದೆ 22 ಕೋಟಿ ಹಾಗೂ 11 ಕೋಟಿ ಮೊತ್ತದ ಸಾಮಗ್ರಿಗಳನ್ನು ಪೂರೈಸಿರೋದಾಗಿ ನಕಲಿ ಬಿಲ್ ಸೃಷ್ಟಿಸಲಾಗಿದೆ. ನಕಲಿ ಜಿಎಸ್​ಟಿ ಬಿಲ್​​ಗಳನ್ನು ಸೃಷ್ಟಿಸಿರುವ ಬಗ್ಗೆ ಜಿಎಸ್​ಟಿ ಪ್ರಾಧಿಕಾರವೇ ಹೇಳಿಕೆ ನೀಡಿದೆ. ಅವ್ಯವಹಾರದ ಹಿಂದೆ ಸಚಿವ ಡಾ.ಅಶ್ವತ್ಥ ನಾರಾಯಣ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆಪಾದಿಸಿದ್ದಾರೆ.

ಇದನ್ನೂ ಓದಿ: ಮದುವೆಗೆ ಮೊದಲೇ ಹುಟ್ಟುವ ಮಗುವಿಗೆ ನಾನೇ ಅಪ್ಪ ಎಂಬಂತಿದೆ ಕಾಂಗ್ರೆಸ್​ ನಡವಳಿಕೆ: ಈಶ್ವರಪ್ಪ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.