ETV Bharat / city

ಲಂಚ ಪಡೆಯುವಾಗ ಸಿಕ್ಕಿಬಿದ್ದ ಆರೋಗ್ಯಾಧಿಕಾರಿ: ವಜಾಗೊಳಿಸುವಂತೆ ಎಎಪಿ ಪ್ರತಿಭಟನೆ

ಬೆಂಗಳೂರು ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್ ಲಂಚ ತೆಗೆದುಕೊಳ್ಳುವಾಗ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರ ಕೈಗೆ ನೇರವಾಗಿ ಸಿಕ್ಕಿ ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಬೈಯಪ್ಪನಹಳ್ಳಿಯ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಮುಂದೆ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Aam Aadmi Party Protest against dismissal of bribery officer in Bangalore
ಲಂಚ ತೆಗೆದುಕೊಳ್ಳುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಗ್ಯಾಧಿಕಾರಿ
author img

By

Published : Jun 1, 2022, 7:28 PM IST

ಬೆಂಗಳೂರು: ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್ ಲಂಚ ತೆಗೆದುಕೊಳ್ಳುವಾಗ ನೇರವಾಗಿ ಆಪ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದ ಕುರಿತು ಇಂದು ಆಮ್​ ಆದ್ಮಿ ಪಕ್ಷದ ಕಾರ್ಯಕರ್ತರು ಜಿಲ್ಲಾ ಆರೋಗ್ಯಾಧಿಕಾರಿ ವಜಾಗೊಳಿಸಬೇಕೆಂದು ಬೈಯಪ್ಪನಹಳ್ಳಿಯ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರು ಧರಣಿ ನಿರತರ ಬಳಿ ಬಂದು ದೂರನ್ನು ಸ್ವೀಕರಿಸಿದ ನಂತರ ಪ್ರತಿಭಟನೆ ಕೈಬಿಡಲಾಯಿತು. ಬೆಂಗಳೂರು ಜಿಲ್ಲಾ ಆರೋಗ್ಯಾಧಿಕಾರಿಗಳ ವ್ಯಾಪಕ ಭ್ರಷ್ಟಾಚಾರಗಳಿಂದಾಗಿ ಬೆಂಗಳೂರು ಜನತೆ ಇಂದು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸಾವು-ನೋವುಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಕೂಡಲೇ ಅವರನ್ನು ವಜಾಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಚನ್ನಪ್ಪಗೌಡ ನಲ್ಲೂರು, ಸುಹಾಸಿನಿ ಪಣಿರಾಜ್, ಜಗದೀಶ್ ಬಾಬು, ಮಿಷೆಲ್ ನರೋನಾ ಸೇರಿದಂತೆ ನೂರಾರು ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ: ಹು-ಧಾ ಪಾಲಿಕೆಯಲ್ಲಿ ಮತ್ತೊಂದು ಪೈಪೋಟಿ: ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕೈ ನಾಯಕರ ಲಾಬಿ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.