ETV Bharat / city

ಸರ್ಕಾರದ ವೈಫಲ್ಯಗಳ ವಿರುದ್ಧ ಆಪ್‌ 'ಗೊರಕೆ ಸಾಕು ಪೊರಕೆ ಬೇಕು' ಅಭಿಯಾನ - ಆಮ್ ಆದ್ಮಿ ಗೊರಕೆ ಸಾಕು ಪೊರಕೆ ಬೇಕು ಅಭಿಯಾನ

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಆಮ್​ ಆದ್ಮಿ ಪಕ್ಷ 'ಗೊರಕೆ ಸಾಕು ಪೊರಕೆ ಬೇಕು' ಎನ್ನುವ ಅಭಿಯಾನವನ್ನು ಪ್ರಾರಂಭಿಸಿದೆ.

bangalore-aam-aadmi-party-started-gorake-saku-porake-beku-campaign
ಆಮ್ ಆದ್ಮಿ ಪಕ್ಷ ಸ
author img

By

Published : Dec 6, 2020, 9:03 PM IST

ಬೆಂಗಳೂರು : ಪಾಲಿಕೆ ಹಾಗೂ ಸರ್ಕಾರದ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸಲು ಆಮ್ ಆದ್ಮಿ ಪಕ್ಷ 'ಗೊರಕೆ ಸಾಕು ಪೊರಕೆ ಬೇಕು' ಅಭಿಯಾನ ಹಮ್ಮಿಕೊಂಡಿದ್ದು, ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸರ್ಕಾರದ ವೈಫಲ್ಯಗಳ ವಿರುದ್ಧ ಆಮ್ ಆದ್ಮಿ ಪಕ್ಷ ಸಮರ

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರಿನ ಜನತೆ ಮೂರು ಪಕ್ಷಗಳ ಕೆಟ್ಟ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ ಬಿಬಿಎಂಪಿ ಹಾಗೂ ಸರ್ಕಾರದ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸುವ ಅಭಿಯಾನವನ್ನು ಪ್ರತಿ ವಾರ ಮಾಡಲಿದ್ದೇವೆ. ಈ ಬಾರಿ ಬಿಬಿಎಂಪಿಯಲ್ಲಿ ಆಮ್ ಆದ್ಮಿ ಪಕ್ಷದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.

ಓದಿ-ಇಮೇಜ್ ಇದ್ರೆ ಅಲ್ವಾ ಡೌನ್ ಆಗೋದು: ಕುಮಾರಸ್ವಾಮಿಗೆ ಗುಟುರು ಹಾಕಿದ 'ಟಗರು'!

ಈ ವೇಳೆ ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ, ಸಹ ಸಂಚಾಲಕಿ ಶಾಂತಲಾ ದಾಮ್ಲೆ, ಕಾರ್ಯದರ್ಶಿ ಸಂಚಿತ್ ಸಹಾನಿ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ರಾಜಾಜಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಗುರುಮೂರ್ತಿ, ಮಂಜುನಾಥ್ ನಗರ ವಾರ್ಡ್ ಅಧ್ಯಕ್ಷ ಬಾಲಕೃಷ್ಣೇಗೌಡ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಫಣಿರಾಜ್.ಎಸ್.ವಿ. ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.