ETV Bharat / city

ಬೆಂಗಳೂರಿನಾದ್ಯಂತ 'ರಸ್ತೆ ಗುಂಡಿಗಳ ಹಬ್ಬ': ಸರ್ಕಾರದ ವಿರುದ್ಧ AAP ಕಿಡಿ - ಬೆಂಗಳೂರು ಪ್ರತಿಭಟನೆ ಸುದ್ದಿ

ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರದ ಅಧ್ಯಕ್ಷ ಮೋಹನ್‌ ದಾಸರಿ ನೇತೃತ್ವದಲ್ಲಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ರಸ್ತೆಗಳಲ್ಲಿರುವ ಗುಂಡಿಯ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

AAP Protest in Bangalore
'ರಸ್ತೆಗುಂಡಿಗಳ ಹಬ್ಬ' ಹೆಸರಿನಲ್ಲಿ ವಿನೂತನ ಪ್ರತಿಭಟನೆ
author img

By

Published : Oct 20, 2021, 7:35 PM IST

ಬೆಂಗಳೂರು: ಗುಂಡಿ ಬಿದ್ದು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಲು, ಜನ ಪ್ರತಿನಿಧಿಗಳನ್ನು ಎಚ್ಚರಿಸಲು ಆಮ್ ಆದ್ಮಿ ಪಕ್ಷ 'ರಸ್ತೆ ಗುಂಡಿಗಳ ಹಬ್ಬ' ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ನಗರದಾದ್ಯಂತ ನಡೆಸಿದೆ.

ಬೆಂಗಳೂರಿನಾದ್ಯಂತ 'ರಸ್ತೆಗುಂಡಿಗಳ ಹಬ್ಬ': ಸರ್ಕಾರದ ವಿರುದ್ಧ AAP ಕಿಡಿ

ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗು ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ನೇತೃತ್ವದಲ್ಲಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ರಸ್ತೆಗಳಲ್ಲಿರುವ ಗುಂಡಿಯ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ, ಆರತಿ ಎತ್ತಿ ಪೂಜೆ ಮಾಡಿದ್ದಾರೆ. ಅಲ್ಲದೇ ಸರ್ಕಾರದ ವಿರುದ್ಧ ಬರಹಗಳಿರುವ ಬೋರ್ಡ್‌ ಹಿಡಿದು ಭ್ರಷ್ಟಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಎಎಪಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ಬೆಂಗಳೂರಿನ ರಸ್ತೆಗಳ ದುರಸ್ತಿಗೆ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 20,060 ಕೋಟಿ ರೂ.ಯನ್ನು ರಾಜ್ಯ ಸರ್ಕಾರ ಖರ್ಚು ಮಾಡಿದೆ. ಆದರೆ ಇಲ್ಲಿನ ರಸ್ತೆಗಳು ಮಾತ್ರ ಶೋಚನೀಯ ಸ್ಥಿತಿಯಲ್ಲಿವೆ.

ಗುಂಡಿಗಳಿಂದಾಗಿ ಅಪಘಾತ, ಸಾವುಗಳು ಸಾಮಾನ್ಯವಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಹಣವು ಯಾರ ಜೇಬು ಸೇರಿದೆ? ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು. ರಸ್ತೆ ಅಭಿವೃದ್ಧಿ ಯೋಜನೆಗಳ ಅನುದಾನದ ಕುರಿತು ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಎಎಪಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, ಕೇಂದ್ರ ಹಾಗು ರಾಜ್ಯ ಸರ್ಕಾರ ವಾಹನ ಸವಾರರ ಜೀವನದ ಜತೆ ಚೆಲ್ಲಾಟವಾಡುತ್ತಿದೆ. ಒಂದೆಡೆ, ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಹೆಚ್ಚಿಸಿ ವಾಹನ ಸವಾರರನ್ನು ಹೈರಾಣಾಗಿಸಿದೆ. ಮತ್ತೊಂದೆಡೆ, ರಸ್ತೆಗಳಿಗೆ ವಿನಿಯೋಗವಾಗಬೇಕಿದ್ದ ಹಣವನ್ನು ಜೇಬಿಗೆ ಇಳಿಸಿಕೊಂಡು ಶಾಸಕರು ಹಾಗು ಸಚಿವರು ರಸ್ತೆ ಗುಂಡಿಗಳಿಗೆ ಕಾರಣವಾಗಿದ್ದಾರೆ. ಕಾಟಾಚಾರಕ್ಕೆ ಗುಂಡಿಗಳಿಗೆ ತೇಪೆ ಹಾಕಲಾಗುತ್ತಿದ್ದು, ಸಣ್ಣ ಮಳೆಗೂ ಅವು ಕಿತ್ತು ಹೋಗುತ್ತಿವೆ ಎಂದು ದೂರಿದರು.

ವಿಜಯನಗರ ಕ್ಷೇತ್ರದಲ್ಲಿ ಅರ್ಚನಾ, ಚಾಮರಾಜಪೇಟೆ ಕ್ಷೇತ್ರದಲ್ಲಿ ಜಗದೀಶ್‌ ಚಂದ್ರ, ಚಿಕ್ಕಪೇಟೆ ಕ್ಷೇತ್ರದಲ್ಲಿ ಪ್ರಕಾಶ್‌ ನಾಗರಾಜ್‌, ಗಾಂಧಿನಗರ ಕ್ಷೇತ್ರದಲ್ಲಿ ರಾಜಶೇಖರ್‌ ದೊಡ್ಡಣ್ಣ, ಗೋಪಿನಾಥ್, ಉಷಾ ಮೋಹನ್‌, ಯಲಹಂಕ ಕ್ಷೇತ್ರದಲ್ಲಿ ಸುಹಾಸಿನಿ ಫಣಿರಾಜ್‌, ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಪಲ್ಲವಿ ಚಿದಂಬರಂ, ಸಿ.ವಿ ರಾಮನ್‌ ಕ್ಷೇತ್ರದಲ್ಲಿ ಪ್ರಶಾಂತಿ, ಪುಲಿಕೇಶಿನಗರ ಕ್ಷೇತ್ರದಲ್ಲಿ ಸಶಾವಲ್ಲಿ, ಮೊಹಮ್ಮದ್‌ ಅಸದ್‌, ಮಹದೇವಪುರ ಕ್ಷೇತ್ರದಲ್ಲಿ ಅಶೋಕ್‌ ಮೃತ್ಯುಂಜಯ ಹಾಗೂ ಮುಖಂಡರಾದ ಜಗದೀಶ್‌ ಬಾಬು, ಆನಂದ್‌ ವಾಸುದೇವನ್‌, ರಾಜ್ಯ ಯುವ ಘಟಕದ ಅಧ್ಯಕ್ಷ ಮುಕುಂದ್‌ ಗೌಡ, ಬೆಂಗಳೂರು ಆಟೋ ಚಾಲಕರ ಘಟಕದ ಉಸ್ಮಾನ್‌ ಹಾಗೂ ಇನ್ನಿತರ ಮುಖಂಡರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Missing 2000 crores.. ಬೆಂಗಳೂರಿನಾದ್ಯಂತ ಆಪ್​ನಿಂದ ರಸ್ತೆ 'ಗುಂಡಿಗಳ ಪೂಜೆ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.