ETV Bharat / city

ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ವಾಪಸ್​ ಪಡೆದ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ - High Court

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಂಚ ಪ್ರಕರಣದಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ), ಅದರ ಮುಖ್ಯಸ್ಥರು ಹಾಗು ಎಡಿಜಿಪಿ ವಿರುದ್ಧ ಕಟು ಟೀಕೆ ಮಾಡಿರುವ ಪ್ರಕರಣವಿದು.

ಹೈಕೋರ್ಟ್
High Court
author img

By

Published : Jul 14, 2022, 6:47 AM IST

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದ ಆರೋಪಿಯ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್​ ಅವರು ತಮ್ಮ ವಿರುದ್ಧ ಮಾಡಿರುವ ಟೀಕೆ, ಟಿಪ್ಪಣಿಗಳನ್ನು ಹಾಗು ಸೇವಾ ದಾಖಲಾತಿ ಕೇಳಿರುವ ಆದೇಶ ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್​ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಹಿಂಪಡೆದಿದ್ದಾರೆ. ಬುಧವಾರ, ಹೈಕೋರ್ಟ್​ನಲ್ಲಿ ಸೀಮಂತ್‌ ಕುಮಾರ್‌ ಸಿಂಗ್‌ ಪರ ವಕೀಲ ಶ್ರೀನಿವಾಸ್‌ ರಾವ್‌ ಸಲ್ಲಿಸಿದ ಮನವಿಯನ್ನು ನ್ಯಾಯಮೂರ್ತಿಗಳಾದ ಪಿ.ಎಸ್‌.ದಿನೇಶ್‌ ಕುಮಾರ್‌ ಮತ್ತು ಸಿ.ಎಂ.ಪೂಣಚ್ಚ ನೇತೃತ್ವದ ವಿಭಾಗೀಯ ಪೀಠವು ಪರಿಗಣಿಸಿ ಅರ್ಜಿ ಹಿಂಪಡೆಯಲು ಅನುಮತಿ ನೀಡಿತು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂ ವ್ಯಾಜ್ಯ ಪ್ರಕರಣದಲ್ಲಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಉಪ ತಹಶೀಲ್ದಾರ್‌ ಪಿ.ಎಸ್‌.ಮಹೇಶ್‌ ಅವರನ್ನು ಎಸಿಬಿ ಬಂಧಿಸಿತ್ತು. ಉಪ ತಹಶೀಲ್ದಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯ ವೇಳೆ ನ್ಯಾ.ಹೆಚ್‌.ಪಿ.ಸಂದೇಶ್‌ ಅವರು ತಮ್ಮನ್ನು ಕುರಿತು ಆದೇಶದಲ್ಲಿ ಉಲ್ಲೇಖಿಸಿರುವ ಆಕ್ಷೇಪಾರ್ಹ ಅಂಶಗಳನ್ನು ಕೈಬಿಡುವಂತೆ ಕೋರಿ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಸೀಮಂತ್‌ ಕುಮಾರ್‌ ಸಿಂಗ್‌ ಸುಪ್ರೀಂಕೋರ್ಟ್​ನಲ್ಲಿ ವಿಶೇಷ ಮೇಲ್ಮನವಿ(ಎಸ್‌ಎಲ್‌ಪಿ) ಸಲ್ಲಿಸಿದ್ದರು.

ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯು ಸಲ್ಲಿಸಿರುವುದು ಜಾಮೀನು ಅರ್ಜಿ ಮಾತ್ರ. ಆದರೆ, ನ್ಯಾಯಮೂರ್ತಿಗಳು ಅದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಂತೆ ಪರಿಗಣಿಸಿ ವಿಚಾರಣೆ ನಡೆಸಿದ್ದಾರೆ. ತಮ್ಮ ಹಾಗೂ ತಮ್ಮ ನೇತೃತ್ವದ ಎಸಿಬಿ ಸಂಸ್ಥೆಯ ಪ್ರಾಮಾಣಿಕತೆ, ಬದ್ಧತೆಯ ಬಗ್ಗೆ ಅನಗತ್ಯ ಟೀಕೆ ಮಾಡಿದ್ದಾರೆ. ತಮ್ಮ ಸೇವಾ ವರದಿಯನ್ನು ಸಲ್ಲಿಸಲು ಕೋರಿರುವುದು ಸಹ ಜಾಮೀನು ಅರ್ಜಿಯ ವ್ಯಾಪ್ತಿಯ ಹೊರಗಿದೆ ಎಂದು ಸೀಮಂತ್‌ ಕುಮಾರ್‌ ಸಿಂಗ್ ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಭ್ರಷ್ಟಾಚಾರ ನಿಗ್ರಹ ದಳವೇ 'ಕಲೆಕ್ಷನ್ ಸೆಂಟರ್': ಎಸಿಬಿಗೆ ಹೈಕೋರ್ಟ್ ತರಾಟೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.