ಬೆಂಗಳೂರು: ಕೆಲ ವಿಭಾಗಗಳಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಲಿನ ಎಸಿಬಿ ದಾಳಿ ಮತ್ತೆ ಮುಂದುವರಿದಿದೆ.
ಬಿಬಿಎಂಪಿ ಕೇಂದ್ರ ಕಚೇರಿ ಸೇರಿ 27 ವಿಭಾಗಗಳ ಮೇಲೆ ದಾಳಿ ನಡೆಸಲಾಗಿದೆ. ಮೂವರು ಎಸ್ಪಿ, ಡಿವೈಎಸ್ಪಿ, ಇನ್ಸ್ಪೆಕ್ಟರ್, ಎಸ್ಐ ಸೇರಿದಂತೆ 200 ಅಧಿಕಾರಿಗಳು, ಟಿಡಿಆರ್, ಕಂದಾಯ, ನಗರ ಯೋಜನೆ, ಜಾಹೀರಾತು, ಬಿಬಿಎಂಪಿ ಆರೋಗ್ಯ ವಿಭಾಗ ಸೇರಿದಂತೆ ಹಲವು ವಿಭಾಗಗಳಲ್ಲಿ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.
ಶನಿವಾರ, ಭಾನುವಾರ ರಜೆ ಹಿನ್ನೆಲೆಯಲ್ಲಿ ತನಿಖೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇಂದು 200 ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ವಿವಿಧ ಕಚೇರಿಗಳಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಎಸ್ಪಿ ಯತೀಶ್ ಚಂದ್ರ ಆಗಮನ: ಎಸಿಬಿ ಎಸ್ಪಿ ಯತೀಶ್ ಚಂದ್ರ ಅವರು ಬಿಬಿಎಂಪಿ ಕಚೇರಿಗೆ ಆಗಮಿಸಿದ್ದು, ಅಧಿಕಾರಿಗಳ ದಾಳಿಯ ನೇತೃತ್ವ ವಹಿಸಿದ್ದಾರೆ. ಡಿಸಿಪಿ ರವಿಶಂಕರ್ ನೇತೃತ್ವದ ತಂಡದಿಂದ ಬಿಬಿಎಂಪಿ ಆರೋಗ್ಯ ವಿಭಾಗ, ಪಾಲಿಕೆ ಹೆರಿಗೆ ಆಸ್ಪತ್ರೆಯ ಮುಖ್ಯಸ್ಥರ ಕೊಠಡಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಬಿಬಿಎಂಪಿ ಮೇಲೆ ಏಕಕಾಲಕ್ಕೆ ಎಸಿಬಿಯ 8 ತಂಡಗಳಿಂದ ರೇಡ್