ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಹಾಗೂ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಗುರುವಾರ ಸಂಜೆ ಸಮಯದಲ್ಲಿ ರಾಜಾಜಿನಗರದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಎಂಡಿ ಲೀಲಾವತಿ ಮತ್ತು ಜಿಎಂ ನಾಗರಾಜಪ್ಪ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಕಡತಗಳ ಪರಿಶೀಲನೆ ಕೈಗೊಂಡಿದ್ದರು.
ಭೋವಿ ಅಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಸಂಬಂಧ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಪ್ರಾಥಮಿಕ ತನಿಖೆಯಲ್ಲಿ ಉದ್ಯಮ ಶೀಲತೆ ಯೋಜನೆ, ಐರಾವತ ಯೋಜನೆ, ಗಂಗಾಕಲ್ಯಾಣ, ಭೂ ಒಡೆತನ, ಸಮೃದ್ಧಿ, ನೇರ ಸಾಲ ಹಾಗೂ ಇತರ ಯೋಜನೆಗಳಲ್ಲಿ ಅವ್ಯವಹಾರ ಬೆಳಕಿಗೆ ಬಂದಿತ್ತು. ಹೀಗಾಗಿ ಎಂ.ಡಿ ಲೀಲಾವತಿ ಹಾಗೂ ಜಿ.ಎಂ ನಾಗರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಓದಿ: ಕಲಬುರಗಿ ಭೂಸ್ವಾಧೀನ ಕಚೇರಿ ಮೇಲೆ ಎಸಿಬಿ ದಾಳಿ: ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯವಸ್ಥಾಪಕ
10 ಲಕ್ಷ ರೂ ಹಣ ವಶಕ್ಕೆ: ಬೆಂಗಳೂರು ನಗರ ಎಸಿಬಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆ ಭೋವಿ ಅಭಿವೃದ್ಧಿ ಪ್ರಾಧಿಕಾರದ ಎಂ.ಡಿ ಲೀಲಾವತಿ ಹಾಗೂ ನಾಗರಾಜ್ರ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ಮಾಡಲಾಗಿತ್ತು. ಈ ವೇಳೆ, 10 ಲಕ್ಷ ರೂ ಹಣ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.