ಬೆಂಗಳೂರು: ಭ್ರಷ್ಟ ಸರ್ಕಾರಿ ಅಧಿಕಾರಿಗಳ ವಿರುದ್ಧ ಇತ್ತೀಚೆಗೆ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಾಲ್ವರ ಮೇಲೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಇತ್ತೀಚೆಗೆ ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿ 60ಕ್ಕಿಂತ ಹೆಚ್ಚು ಕಡೆಗಳಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ಪೈಕಿ ಬೆಂಗಳೂರಿನಲ್ಲಿ ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿಕೊಂಡಿತ್ತು.
ಇದನ್ನೂ ಓದಿ: ಮಂಡ್ಯದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯ ಬರ್ಬರ ಹತ್ಯೆ
ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಸಿಯೋ ಥೆರಪಿಸ್ಟ್ ಆಗಿರುವ ಎಸ್.ಎನ್.ನಾಗರಾಜ್, ಮಾರಪ್ಪಪಾಳ್ಯದ ಬಿಬಿಎಂಪಿ ಶಾಲೆಯ ಡಿ ಗ್ರೂಪ್ ನೌಕರ ಗಿರಿ, ಸಕಾಲ ಇಲಾಖೆಯ ಆಡಳಿತಾಧಿಕಾರಿ ಎಲ್.ಸಿ.ನಾಗರಾಜ್, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಮಾಯಣ್ಣ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಕಲಂ13(1),13(2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಉಳಿದಂತೆ 11 ಸರ್ಕಾರಿ ಅಧಿಕಾರಿಗಳ ಮೇಲೂ ಆಯಾ ಜಿಲ್ಲಾ ಎಸಿಬಿಯಿಂದ ಎಫ್ ಐ ಆರ್ ದಾಖಲಾಗಿತ್ತು.