ETV Bharat / city

ಹೈಕೋರ್ಟ್ ಚಾಟಿ ಬೆನ್ನಲೇ ಎಚ್ಚೆತ್ತ ಎಸಿಬಿ: ಬೆಂಗಳೂರು ಡಿಸಿಗೆ ನೋಟಿಸ್

ಮೇ. 21 ರಂದು ಬೆಂಗಳೂರು ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿತ್ತು. ಈ ಪ್ರಕರಣ ಸಂಬಂಧ ಎಸಿಬಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

dc acb
dc acb
author img

By

Published : Jun 30, 2022, 1:05 PM IST

ಬೆಂಗಳೂರು: ಹೈಕೋರ್ಟ್ ಚಾಟಿ ಬೀಸಿದ ಬೆನ್ನಲೇ ಭೂ ವ್ಯಾಜ್ಯ ಪ್ರಕರಣವೊಂದರ ತನಿಖೆ ನಡೆಸುತ್ತಿರುವ ಎಸಿಬಿ ತನಿಖಾಧಿಕಾರಿಗಳ ಮುಂದೆ ನಗರ ಜಿಲ್ಲಾಧಿಕಾರಿ ಮಂಜುನಾಥ್ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ತನಿಖಾಧಿಕಾರಿಗಳ ಮುಂದೆ ಡಿಸಿ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ಬಂಧಿಸುವುದನ್ನ ಬಿಟ್ಟು ಸಣ್ಣ-ಪುಟ್ಟ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿರುವುದು ಸರಿಯಲ್ಲ ಎಂದು ಬುಧವಾರ ನಡೆದ ವಿಚಾರಣೆಯಲ್ಲಿ ಎಸಿಬಿಗೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಎಸಿಬಿ, ವಿಚಾರಣೆಗೆ ಹಾಜರಾಗುವಂತೆ ಡಿಸಿಗೆ ನೋಟಿಸ್ ನೀಡಿತ್ತು.

ಮೇ 21ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಉಪ ತಹಶೀಲ್ದಾರ್ ಮಹೇಶ್ ಎಂಬುವರು ಗುತ್ತಿಗೆ ನೌಕರ ಚೇತನ್ ಆಲಿಯಾಸ್ ಚಂದ್ರು ಎಂಬುವರಿಂದ 5 ಲಕ್ಷ ರೂಪಾಯಿ ಲಂಚ ಪಡೆದು ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಪಾತ್ರದ ಬಗ್ಗೆ ಆರೋಪ ಕೇಳಿಬಂದಿತ್ತು.

ಬೇಗೂರಿನ ನಿವಾಸಿಯೊಬ್ಬರು ಅನೇಕಲ್​ನ‌ ಕೂಡ್ಲು ಗ್ರಾಮದಲ್ಲಿ 38 ಗುಂಟೆ ಜಮೀನು ಹೊಂದಿದ್ದರು. ಡಿಸಿ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿತ್ತು. ಅರ್ಜಿದಾರರ ಅರ್ಜಿ ಕ್ಲಿಯರ್ ಮಾಡಿಕೊಡಬೇಕಾದರೆ ಆರೋಪಿ ಮಹೇಶ್ ಆರಂಭದಲ್ಲಿ 15 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು ನಂತರ 5 ಲಕ್ಷ ರೂ.ಗೆ ಒಪ್ಪಿಕೊಂಡಿದ್ದರು. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದರು‌. ಜಮೀನು ವಿಚಾರವಾಗಿ ದೂರುದಾರರು ಎರಡು ಬಾರಿ ಜಿಲ್ಲಾಧಿಕಾರಿ ಭೇಟಿ‌ ಮಾಡಿದ್ದರು ಎನ್ನಲಾಗಿದೆ.

(ಇದನ್ನೂ ಓದಿ: ಭ್ರಷ್ಟರ ಮೇಲೆ ACB ದಾಳಿ: ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.