ಬೆಂಗಳೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರ ಕಾಲು ಕಟ್ ಆಗಿರುವ ಘಟನೆ ಜಿಕೆವಿಕೆ ಸಿಗ್ನಲ್ ಬಳಿ ನಡೆದಿದೆ.
ಬೈಕ್ ಸವಾರ ಜಿಕೆವಿಕೆ ಬಳಿ ಯೂ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ನ ಹಿಂಬದಿ ಕುಳಿತ್ತಿದ್ದ ಮಹಿಳೆ ಕೆಳಗೆ ಬಿದ್ದಿದ್ದು, ಮಹಿಳೆಯ ಕಾಲು ಕಟ್ ಆಗಿದೆ. ಸದ್ಯ ಗಾಯಾಳು ಮಹಿಳೆಯನ್ನು ಬ್ಯಾಟರಾಯನಪುರದ ಪ್ರೊಲೈಫ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.