ETV Bharat / city

1-5 ನೇ ತರಗತಿ ಶಾಲೆ ಆರಂಭಿಸಿದ ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ - schools opened by 1st to 5th

ಖಾಸಗಿ ಶಾಲೆಗಳಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಒಂದರಿಂದ 3ರವರೆಗೆ ತರಗತಿಯನ್ನು ನಡೆಸುತ್ತಿರುವ ಮಾಹಿತಿ ದೊರಕಿದೆ. ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್​ ಹೇಳಿದ್ದಾರೆ.

ಸುರೇಶ್ ಕುಮಾರ್
ಸುರೇಶ್ ಕುಮಾರ್
author img

By

Published : Mar 11, 2021, 8:40 PM IST

ಬೆಂಗಳೂರು: ಸರ್ಕಾರದ ನಿಯಮ ಮೀರಿ 1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸಿರುವ ಖಾಸಗಿ ಶಾಲೆಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಪ್ರತಿಕ್ರಿಯೆ ತಿಳಿಸಿದ್ದಾರೆ.

ಇಂದು, ಶಾಲಾರಂಭಗಳ ಬಗ್ಗೆ ಟ್ವೀಟ್ ಮಾಡಿದ್ದ ಆರೋಗ್ಯ ಸಚಿವ ಕೆ.ಸುಧಾಕರ್, ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರುಗಳು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ನನ್ನ ಮನವಿ ಎಂದು ಬರೆದಿದ್ದರು.

  • ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಶ್ರೀ @nimmasuresh ಅವರಿಗೆ ನನ್ನ ಮನವಿ.

    2/3

    — Dr Sudhakar K (@mla_sudhakar) March 11, 2021 " class="align-text-top noRightClick twitterSection" data=" ">

ಇದಕ್ಕೆ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿ, ಈ ಕುರಿತು ಆರೋಗ್ಯ ಸಚಿವರು ನನ್ನೊಡನೆ ಮಾತನಾಡಿದ್ದಾರೆ. ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಅದರ ಹಿಂದೆ ಮಕ್ಕಳ ಹಿತ, ಯೋಗಕ್ಷೇಮಗಳ ಕುರಿತು ಚಿಂತನೆ ಇರುತ್ತದೆ. ಸದ್ಯಕ್ಕೆ ರಾಜ್ಯದಲ್ಲಿ 6ನೇ ತರಗತಿಯಿಂದ 12ನೇ ತರಗತಿಯವರೆಗೆ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿವೆ. ಒಂದರಿಂದ 5ರವರೆಗೂ ತರಗತಿಗಳನ್ನು ಪ್ರಾರಂಭಿಸಲು ಆರೋಗ್ಯ ಇಲಾಖೆ ಸಮ್ಮತಿ ನೀಡಿಲ್ಲ.

ಶಿಕ್ಷಣ ಇಲಾಖೆ ಸಹ ಇದನ್ನು ಆಧರಿಸಿ ನಿರ್ಧಾರಗಳನ್ನು ಕೈಗೊಂಡಿದೆ. ಕೆಲ ಖಾಸಗಿ ಶಾಲೆಗಳಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಒಂದರಿಂದ 3ರವರೆಗೆ ತರಗತಿಯನ್ನು ನಡೆಸುತ್ತಿರುವ ಮಾಹಿತಿ ದೊರಕಿದೆ. ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಯಾರೂ ಸಹ ಮಕ್ಕಳ ಯೋಗಕ್ಷೇಮಕ್ಕಾಗಿ ದೀರ್ಘ ಚಿಂತನೆ ನಡೆಸಿ ಕೈಗೊಂಡಿರುವ ಸರ್ಕಾರದ ನಿರ್ಧಾರವನ್ನು, ಆದೇಶಗಳನ್ನು ಮೀರಿ ತಾವೇ ಸ್ವತ: ಯಾವುದೇ ನಿರ್ಧಾರ ಕೈಗೊಳ್ಳುವುದಕ್ಕೆ ಅವಕಾಶವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕೋತಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಹಾಸ್ಟೆಲ್​ ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.