ETV Bharat / city

ನಟ ದರ್ಶನ್ ಕೋವಿಡ್-19 ನಿಯಮ ಉಲ್ಲಂಘನೆ ಪ್ರಕರಣ...ಸರ್ಕಾರಕ್ಕೆ ಹೈಕೋರ್ಟ್ ತರಾಟೆ - Mysore Chamundi hill

ಸ್ಯಾಂಡಲ್​ವುಡ್ ನಟ ದರ್ಶನ್ ಹಾಗೂ ಕೆಲವು ರಾಜಕಾರಣಿಗಳು ಕೊರೊನಾ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯಿತು. ನಿಯಮ ಉಲ್ಲಂಘಿಸಿದವರ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರಿ ಪಲ ವಕೀಲರನ್ನು ಹೈಕೋರ್ಟ್ ಪ್ರಶ್ನಿಸಿತು.

Actor Darshan Covid-19 violation of law
ನಟ ದರ್ಶನ್
author img

By

Published : Jul 27, 2020, 3:08 PM IST

ಬೆಂಗಳೂರು: ನಟ ದರ್ಶನ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ವೇಳೆ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಜನಪ್ರತಿನಿಧಿಗಳು, ನಟರು ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಸೂಕ್ತ ಕ್ರಮ ಜರುಗಿಸದ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹಿಂದಿನ ವಿಚಾರಣೆ ವೇಳೆ ಸರ್ಕಾರಕ್ಕೆ ಸೂಚನೆ ನೀಡಿದ್ದ ಪೀಠ, ಕೋವಿಡ್-19 ಮಾರ್ಗಸೂಚಿಗಳನ್ನು ಯಾರೇ ಉಲ್ಲಂಘಿಸಿದರೂ ನಿಯಮಾನುಸಾರ ಕ್ರಮ ಜರುಗಿಸಿ, ಪ್ರಭಾವಿಗಳೆಂದು ಕ್ರಮ ಜರುಗಿಸಲು ಹಿಂದೇಟು ಹಾಕಬೇಡಿ ಎಂದು ಸೂಚಿಸಿತ್ತು.

ಇಂದು ನಡೆದ ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್, ಕ್ರಮ ಜರುಗಿಸಿರುವ ಕುರಿತು ಮಾಹಿತಿ ನೀಡಲು ಯತ್ನಿಸಿದರು. ಡಿಕೆಶಿ ಪುತ್ರಿ ನಿಶ್ಚಿತಾರ್ಥ, ಪಿ.ಟಿ. ಪರಮೇಶ್ವರ್​ ನಾಯಕ್​​​​​​ ಮಗನ ಮದುವೆ, ಏರ್​​​​ಪೋರ್ಟ್​ನಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪಿಸುವ ಕಾಮಗಾರಿ ಪೂಜೆ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಿರುವ ಕುರಿತು ಪೀಠ ಎತ್ತಿದ ಹಲವು ಪ್ರಶ್ನೆಗಳಿಗೆ ಎಎಜಿ ಬಳಿ ಸಮರ್ಪಕ ವಿವರಣೆ ಇರಲಿಲ್ಲ. ಹೀಗಾಗಿ ಈ ಬಗ್ಗೆ ತಿಳಿದು ಮಾಹಿತಿ ಸಲ್ಲಿಸುವುದಾಗಿ ತಿಳಿಸಿದರು.

ಇನ್ನು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ದರ್ಶನ್, ರಾಜಕಾರಣಿಗಳಾದ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸೋಮಶೇಖರ್ ಸರಿಯಾಗಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ದೇವಸ್ಥಾನ ಪ್ರವೇಶಿಸಿದ ವಿಚಾರ ಪ್ರಸ್ತಾಪಿಸಲಾಯಿತು. ಈ ವೇಳೆ ದೇವಸ್ಥಾನಕ್ಕೆ ಪ್ರವೇಶಿಸಿಲು ಅನುಮತಿ ನೀಡಿದ್ದು ಹೇಗೆ ಎಂದು ಪೀಠ ಪ್ರಶ್ನಿಸಿತು. ಇದಕ್ಕೆ ಸರ್ಕಾರದ ಪರ ವಕೀಲರು ಉತ್ತರಿಸಿ ಕೆಲ ಆಯ್ದ ವ್ಯಕ್ತಿಗಳಿಗೆ ದೇವಸ್ಥಾನದಿಂದ ಅವಕಾಶ ಕಲ್ಪಿಸಲಾಗಿದೆ ಎಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ದೇವಸ್ಥಾನವೆಂದ ಮೇಲೆ ಎಲ್ಲರೂ ಭಕ್ತರೇ, ಅಂತದ್ದರಲ್ಲಿ ಆಯ್ದ ವ್ಯಕ್ತಿಗಳಿಗೆ ಹೇಗೆ ಅವಕಾಶ ನೀಡಲಾಗಿದೆ. ಯಾವ ಕಾನೂನಿನಡಿ ನಟರು, ರಾಜಕಾರಣಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ನಿಯಮ ಉಲ್ಲಂಘಿಸಿರುವ ಇವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡಿತು.

ಬಳಿಕ ಈ ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಸಮಗ್ರ ವಿವರ ಸಲ್ಲಿಸುವಂತೆ ತಾಕೀತು ಮಾಡಿ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಿತು. ಇದೇ ವೇಳೆ ವಕೀಲ ಜಿ.ಆರ್. ಮೋಹನ್ ವಾದಿಸಿ, ಜನಪ್ರತಿನಿಧಿಗಳು, ನಟರು ಗುಂಪು ಸೇರಿಸುತ್ತಿರುವುದರಿಂದಲೇ ಕೊರೊನಾ ವ್ಯಾಪಕವಾಗಿ ಹರಡಲು ಕಾರಣವಾಗುತ್ತಿದೆ ಎಂದರು. ಈ ಕುರಿತು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ಸ್ವಾತಂತ್ರ್ಯ ದಿನಾಚರಣೆಗೆ ಸೆಲಬ್ರಿಟಿಗಳಿಗೆ ಭಾಗವಹಿಸಲು ಅವಕಾಶ ನೀಡಿ ಯಾವುದಾದರೂ ಆದೇಶ ಹೊರಡಿಸಿದ್ದರೆ ಅದನ್ನು ಕೂಡಾ ಈ ಅರ್ಜಿಯೊಂದಿಗೆ ವಿಚಾರಣೆ ನಡೆಸಲಾಗುವುದು ಎಂದಿತು. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು. ಸರ್ಕಾರ ಆದೇಶ ಹೊರಡಿಸಿದ್ದು, ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವುದಾಗಿ ಸ್ಪಷ್ಟಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.