ETV Bharat / city

ಕೋಮಾ ಸ್ಥಿತಿಯಲ್ಲಿ ಸಂಚಾರಿ ವಿಜಯ್.. ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ - ಸಂಚಾರಿ ವಿಜಯ್ ಕೋಮಾ

ಸಂಚಾರಿ ವಿಜಯ್ ಸದ್ಯ ಕೋಮಾ ಸ್ಥಿತಿಯಲ್ಲಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಬುಲೆಟಿನ್ ಬಿಡುಗಡೆ ಮಾಡಿದೆ.

sancharivijay
sancharivijay
author img

By

Published : Jun 13, 2021, 11:03 PM IST

ಬೆಂಗಳೂರು: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಖ್ಯಾತ ನಟ ಸಂಚಾರಿ ವಿಜಯ್​ಗೆ ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯು ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದೆ.

ನಟನ ಆರೋಗ್ಯ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆ, ಅಪಘಾತ ಆದ ತಕ್ಷಣ ವಿಜಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಮರ್ಜೆನ್ಸಿ ವಾರ್ಡ್​ಗೆ ತಂದಾಗ ತುಂಭಾ ಗಂಭೀರ ಸ್ಥಿತಿಯಲ್ಲಿದ್ದರು. ಎ ಸಿಟಿ ಸ್ಕ್ಯಾನ್ ಮಾಡಿದಾಗ ಮೆದುಳಿಗೆ ತೀವ್ರ ಪೆಟ್ಟಾಗಿರುವುದು ಹಾಗೂ ರಕ್ತಸ್ರಾವವಾಗಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಬ್ರೈನ್ ಸರ್ಜರಿ ಮಾಡಲಾಯಿತು. ಸದ್ಯ ವಿಜಯ್ ನ್ಯೂರೋ ಐಸಿಯುನಲ್ಲಿ ಲೈಫ್ ಸಪೋರ್ಟ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ
ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ

ಸಂಚಾರಿ ವಿಜಯ್ ಸದ್ಯ ಕೋಮಾ ಸ್ಥಿತಿಯಲ್ಲಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಹಿರಿಯ ನರಶಸ್ತ್ರಚಿಕಿತ್ಸಾ ವೈದ್ಯರಾದ ಡಾ. ಅರುಣ್ ಎಲ್ ನಾಯ್ಕ್ ತಿಳಿಸಿದ್ದಾರೆ.

ವಿಜಯ್ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದ್ದು, ಸಾಧ್ಯವಿರುವ ಎಲ್ಲಾ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

( ಬೆಂಗಳೂರಲ್ಲಿ ಭೀಕರ ಅಪಘಾತ: ಸ್ಯಾಂಡಲ್​ವುಡ್ ನಟ ಸಂಚಾರಿ ವಿಜಯ್​ ಸ್ಥಿತಿ ಗಂಭೀರ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.