ETV Bharat / city

ದೇವಾಲಯಗಳ ತಸ್ತೀಕ್ ಮೊತ್ತ 60 ಸಾವಿರಕ್ಕೆ ಹೆಚ್ಚಳ; ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆಗಳಿಗೆ ಮನ್ನಣೆ - ಜಮೀನು, ಸ್ವತ್ತುಗಳ ಸರ್ವೆಗೆ ಡ್ರೋನ್​ ಬಳಕೆ

ಭಕ್ತಾದಿಗಳ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ, ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ 2021- 22 ಸಾಲಿನಲ್ಲಿ 168 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂ. ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ.

administration
ಆಡಳಿತ ಸುಧಾರಣೆ
author img

By

Published : Mar 4, 2022, 2:59 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತ ಸುಧಾರಣೆ ಹಾಗೂ ಸಾರ್ವಜನಿಕ ಸೇವೆಗಳಿಗೆ ಹೆಚ್ಚಿನ ಮನ್ನಣೆ ನೀಡಿದ್ದಾರೆ. 287 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯಾದ್ಯಂತ ಕೃಷಿ ಜಮೀನು ಮತ್ತು ಇತರೆ ಸ್ವತ್ತುಗಳನ್ನು ಡ್ರೋನ್ ಆಧಾರಿತ ಸರ್ವೆ ಕೈಗೊಳ್ಳಲು ಕ್ರಮ ವಹಿಸಲಾಗಿದೆ.

ಮೂರು ವರ್ಷದೊಳಗೆ ವಿದ್ಯುನ್ಮಾನ ಪಹಣಿ ಮತ್ತು ನಕ್ಷೆ ಒದಗಿಸುವುದು, 406 ಕೋಟಿ ರೂಪಾಯಿ ವೆಚ್ಚದಲ್ಲಿ ಉಪ ನೋಂದಣಾಧಿಕಾರಿಗಳ ಕಚೇರಿಗಳ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ಉನ್ನತೀಕರಣ, ಎಲ್ಲಾ ಪಾರಂಪರಿಕ ನೋಂದಾಯಿತ ಶಾಶ್ವತ ದಾಖಲೆಗಳ ಸ್ಕ್ಯಾನಿಂಗ್, ಮೊದಲ ಹಂತದಲ್ಲಿ ಬಿಬಿಎಂಪಿ ಮತ್ತು 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬರುವ ದಾಖಲೆಗಳ ಸರ್ವೆಗೆ 15 ಕೋಟಿ ರೂಪಾಯಿ ಅನುದಾನವನ್ನು ಬಜೆಟ್​ನಲ್ಲಿ ಮೀಸಲಿಡಲಾಗಿದೆ.

ಭಕ್ತಾದಿಗಳ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ, ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ 2021- 22 ಸಾಲಿನಲ್ಲಿ 168 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂ. ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ.

ಕೆಎಸ್​ಆರ್​ಪಿ ಮಹಿಳಾ ಕಂಪನಿ ಆರಂಭ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ತಸ್ತಿಕ್​​ ಮೊತ್ತವನ್ನು 60 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಭಕ್ತಾದಿಗಳಿಗೆ ಆನ್‌ಲೈನ್ ಮುಖಾಂತರ ವಿವಿಧ ಸೇವೆಗಳನ್ನು ಒದಗಿಸಲು Integrated Temple Management System ತಂತ್ರಾಂಶವನ್ನು ಜಾರಿ ಮಾಡಲಾಗಿದೆ. ಇ-ಆಡಳಿತ ಇಲಾಖೆ ಹಾಗೂ ಬೆಂಗಳೂರಿನ III-T ಪಾಲುದಾರಿಕೆಯಲ್ಲಿ Centre for Technology Research in Digital Governance ಕೇಂದ್ರವನ್ನು ಸ್ಥಾಪನೆಗೆ ಬಜೆಟ್​ನಲ್ಲಿ ಘೋಷಿಸಲಾಗಿದೆ.

ಮನೆಗಳು, ವಸತಿ ಬಡಾವಣೆ ನಿರ್ಮಾಣಕ್ಕೆ ಅನುಮೋದನೆ ಪ್ರಕ್ರಿಯೆ ಸರಳೀಕರಣ (ನಾಗರಿಕ ಸೇವೆ ಸರಳೀಕರಣ), ಪೊಲೀಸ್ ಗೃಹ ಯೋಜನೆಯ 2ನೇ ಹಂತದಲ್ಲಿ ಪ್ರಸಕ್ತ ಸಾಲಿಗೆ 250 ಕೋಟಿ ರೂಪಾಯಿ ಅನುದಾನ, ಪೊಲೀಸ್ ಇಲಾಖೆಯ ಹೊಸ ಮೊಬಿಲಿಟಿ ಯೋಜನೆಗೆ 50 ಕೋಟಿ ರೂಪಾಯಿ, ರಾಜ್ಯದಲ್ಲಿ ನೂತನ ಕೆ ಎಸ್ ಆರ್ ಪಿ ಮಹಿಳಾ ಕಂಪನಿ, ಅಗ್ನಿಶಾಮಕ ಸಿಬ್ಬಂದಿಯ ವಿಮಾ ಮೊತ್ತವನ್ನು 1 ಲಕ್ಷ ದಿಂದ 20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಹೊಸ ಜೈಲು: ದಾವಣಗೆರೆಯಲ್ಲಿ ಎಸ್ ಡಿ ಆರ್ ಎಫ್ ಕಂಪನಿ ಪ್ರಾರಂಭ, ಕಾರಾಗೃಹಗಳಲ್ಲಿ ಅತ್ಯಾಧುನಿಕ ಮಾದರಿಯ ಉಪಕರಣಗಳು ಮತ್ತು ಮೊಬೈಲ್ ಜಾಮರ್‌ಗಳ ಅಳವಡಿಕೆಗೆ ಕ್ರಮ, ಕಾರಾಗೃಹಗಳಲ್ಲಿ ಬಂಧಿಗಳ ದಟ್ಟಣೆ ಕಡಿಮೆಗೊಳಿಸುವ ಸಾಮರ್ಥ್ಯ ಹೆಚ್ಚಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ, ದೇವನಹಳ್ಳಿ, ಕೋಲಾರ, ಹೊಸಪೇಟೆ, ಗದಗ, ಬಳ್ಳಾರಿ, ವಿಜಯಪುರ, ಬೀದರ್‌, ಯಾದಗಿರಿ ಮತ್ತು ದಾವಣಗೆರೆಗಳಲ್ಲಿ ಒಟ್ಟು 80 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣಕ್ಕೆ ಬಜೆಟ್​ನಲ್ಲಿ ಘೋಷಿಸಲಾಗಿದೆ.

ಇದನ್ನೂ ಓದಿ: ರಾಜ್ಯ ಬಜೆಟ್​ 2022-23: ನೀರಾವರಿ ಕ್ಷೇತ್ರಕ್ಕೆ ಬಂಪರ್​ ಕೊಡುಗೆ ಕೊಟ್ಟ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.