ಬೆಂಗಳೂರು: ಸರ್ಕಾರದ ನಿರ್ದೇಶನದಂತೆ ಸಿಇಟಿ-2021ನೇ ಸಾಲಿನ ಇಂಜಿನಿಯರಿಂಗ್, ಟೆಕ್ನಾಲಜಿ , ಆರ್ಕಿಟೆಕ್ಚರ್ ಹಾಗೂ ಕೃಷಿ ವಿಜ್ಞಾನ ಫಾರ್ಮಸಿ, ಪಶುಸಂಗೋಪನೆ, ಬಿ.ಫಾರ್ಮ್, ನ್ಯಾಚುರೋಪತಿ ಮತ್ತು ಯೋಗ ಬಿಎಸ್ಸಿ (ಅನರ್ಸ್) ಇತ್ಯಾದಿ ಕೋರ್ಸುಗಳ ಪ್ರವೇಶಾತಿಗೆ ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸಿ ಸಂಬಂಧಿಸಿದ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದಾಗಿದೆ. ಈ ಕುರಿತು ಕೆಎಇ ಪ್ರಕಟಣೆ ಹೊರಡಿಸಿದೆ.
ಡಿಸೆಂಬರ್ 28ರಿಂದ 29ರ ತನಕ ಅಭ್ಯರ್ಥಿಗಳು ಶುಲ್ಕ ಪಾವತಿ ಮತ್ತು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಹಿಂದಿನ ಸುತ್ತಿನಲ್ಲಿ ಶುಲ್ಕವನ್ನು ಪಾವತಿಸಿದ್ದರೆ ಈ ಸುತ್ತಿನಲ್ಲಿ ಹಂಚಿಕೆಯರ ಸೀಟಿಗೆ ಹೊಂದಾಣಿಕೆ ಮಾಡಲಾಗುತ್ತದೆ. ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಡಿಸೆಂಬರ್ 28ರಿಂದ 30 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಕಾರ್ಯಕಾರಣಿ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ಚರ್ಚೆ ಮಾಡಲಾಗುವುದು: ಜಗದೀಶ್ ಶೆಟ್ಟರ್