ಬೆಂಗಳೂರು: ಕೋವಿಡ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಕೀಲ ಸಮುದಾಯಕ್ಕೆ ಆರ್ಥಿಕ ಹಾಗೂ ವೈದ್ಯಕೀಯ ನೆರವು ನೀಡಬೇಕು ಎಂದು ಬೆಂಗಳೂರು ವಕೀಲರ ಸಂಘ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಘದ ಅಧ್ಯಕ್ಷ ರಂಗನಾಥ್ ಪತ್ರ ಬರೆದಿದ್ದಾರೆ. ವಕೀಲರು ಮತ್ತು ಅವರ ಕುಟುಂಬದವರನ್ನು ಮುಂಚೂಣಿ ಕಾರ್ಯಕರ್ತರು ಎಂದು ಪರಿಗಣಿಸಬೇಕು. ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ, ವಕೀಲರಿಗೆ ಆದ್ಯತೆ ಮೇರೆಗೆ ಲಸಿಕೆ ಹಾಕಲು ನೆರವು ನೀಡಬೇಕು. ಸಂಕಷ್ಟದಲ್ಲಿರುವ ವಕೀಲರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಹಾಗೂ ಕೋವಿಡ್ ಸೋಂಕಿಗೆ ಒಳಗಾಗಿರುವ ವಕೀಲರಿಗೆ ಹಾಗೂ ನ್ಯಾಯಾಂಗ ಸಿಬ್ಬಂದಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.