ETV Bharat / city

ಸಂಸದೀಯ ಕಾರ್ಯದರ್ಶಿಗಳ ವೇತನ ಭತ್ಯೆಗಳು ಮತ್ತು ಸಂಕೀರ್ಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ

author img

By

Published : Dec 9, 2020, 4:54 PM IST

ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ವೇತನ, ಭತ್ಯೆಗಳು ಮತ್ತು ಸಂಕೀರ್ಣ ಉಪಬಂಧಗಳ ಅಧಿನಿಯಮ 1963ನ್ನು ನಿರಸನಗೊಳಿಸುವ ಉದ್ದೇಶವನ್ನು ಈ ವಿಧೇಯಕ ಹೊಂದಿದೆ..

ವಿಧಾನಸಭೆ
ವಿಧಾನಸಭೆ

ಬೆಂಗಳೂರು : ಕರ್ನಾಟಕ ಕೈಗಾರಿಕಾ ನೀತಿ 2020-25ರಲ್ಲಿ ಪ್ರಸ್ತಾಪಿಸಿರುವ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದ 2020ನೇ ಸಾಲಿನ ಕರ್ನಾಟಕ ಸ್ಟಾಂಪ್ (2ನೇ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಇಂದು ಒಪ್ಪಿಗೆ ಪಡೆಯಲಾಯಿತು.

ಕಂದಾಯ ಸಚಿವ ಆರ್.ಅಶೋಕ್ ಅವರು ವಿಧೇಯಕವನ್ನು ಮಂಡಿಸಿ, ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡಲು ಮತ್ತು 2020-21ರ ಆಯವ್ಯಯ ಭಾಷಣದಲ್ಲಿ ಪ್ರಸ್ತಾಪಿಸಿರುವ 35 ಲಕ್ಷ ರೂ.ವರೆಗಿನ ಫ್ಲಾಟ್ ಅಥವಾ ಅಪಾರ್ಟ್‍ಮೆಂಟ್‍ನ ಮೊದಲ ಮಾರಾಟಕ್ಕೆ ಸ್ಟಾಂಪ್​ ತೆರಿಗೆ ಕಡಿಮೆ ಮಾಡಲು ಈ ವಿಧೇಯಕ ತರಲಾಗಿದೆ ಎಂದು ಹೇಳಿದರು. ಚರ್ಚೆಯ ನಂತರ ವಿಧೇಯಕವನ್ನು ಸ್ಪೀಕರ್ ಮತಕ್ಕೆ ಹಾಕಿದಾಗ ಧ್ವನಿಮತದ ಒಪ್ಪಿಗೆ ದೊರೆಯಿತು.

ಎಸ್​ಸಿಪಿ-ಟಿಎಸ್​ಪಿಗೆ ಹಣ ಬಳಕೆ ವಿಚಾರ: ವಿಧಾನಸಭೆಯಲ್ಲಿ ಶಾಸಕರ ಧರಣಿ

ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ವೇತನ ಭತ್ಯೆಗಳು ಮತ್ತು ಸಂಕೀರ್ಣ ಉಪಬಂಧಗಳ (ನಿರಸನಗೊಳಿಸುವ) ವಿಧೇಯಕದ 2020ಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು ಮಂಡಿಸಿದ ವಿಧೇಯಕಕ್ಕೆ ದ್ವನಿ ಮತದ ಒಪ್ಪಿಗೆ ದೊರೆಯಿತು.

ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ವೇತನ, ಭತ್ಯೆಗಳು ಮತ್ತು ಸಂಕೀರ್ಣ ಉಪಬಂಧಗಳ ಅಧಿನಿಯಮ 1963ನ್ನು ನಿರಸನಗೊಳಿಸುವ ಉದ್ದೇಶವನ್ನು ಈ ವಿಧೇಯಕ ಹೊಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.