ETV Bharat / city

ಕೃಷಿ ಯಂತ್ರೋಪಕರಣ ಸಹಾಯಧನ ನಿಲ್ಲಿಸಿಲ್ಲ, ಅನುದಾನವೂ ಕಡಿತವಾಗಿಲ್ಲ: ಸಚಿವ ಬಿ ಸಿ ಪಾಟೀಲ್ ಸ್ಪಷ್ಟನೆ

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 4,954 ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತ ನಂತರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು..

bc patil
bc patil
author img

By

Published : Mar 23, 2022, 7:40 PM IST

ಬೆಂಗಳೂರು : ಕೃಷಿ ಯಂತ್ರೋಪಕರಣ ಸಹಾಯಧನವನ್ನು ನಿಲ್ಲಿಸಿಲ್ಲ ಹಾಗೂ ಅನುದಾನವನ್ನೂ ಕಡಿತ ಮಾಡಿಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು. ಪ್ರಶ್ನೋತ್ತರ ವೇಳೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸಕ್ತ ಸಾಲಿನಲ್ಲಿ 404 ಕೋಟಿ ರೂ. ಸಹಾಯಧನ ನೀಡಲಾಗಿದೆ. ಕೃಷಿ ಹೊಂಡ ಯೋಜನೆ 2020ರಲ್ಲಿ ನಿಲ್ಲಿಸಲಾಗಿದೆ. ಈಗ ನರೇಗಾ ಯೋಜನೆಯಡಿ ಇದನ್ನು ಮಾಡಲು ಅವಕಾಶವಿದೆ ಎಂದರು.

2018-19ರಲ್ಲಿ ಕೇಂದ್ರ ಸರ್ಕಾರದಿಂದ 2001 ಕೋಟಿ ರೂ. ಹಾಗೂ 1299 ಕೋಟಿ ರಾಜ್ಯ ಸರ್ಕಾರದ ಪಾಲು ಸಂಪೂರ್ಣ ಬಿಡುಗಡೆಯಾಗಿದೆ. 2020-21ಕ್ಕೆ 404 ಕೋಟಿ ರೂ. ಈ ವರ್ಷ ಬಿಡುಗಡೆ ಮಾಡಿದ್ದೇವೆ. ಜಿಲ್ಲಾವಾರು, ತಾಲೂಕುವಾರು ಪಟ್ಟಿ ಬಿಡುಗಡೆ ಮಾಡುತ್ತೇವೆ. ಜಲಾನಯನದಲ್ಲಿ ರಾಜಸ್ಥಾನ ಬಿಟ್ಟರೆ ಹೆಚ್ಚು ಒಣ ಭೂಮಿ ಇರುವ ರಾಜ್ಯ ಕರ್ನಾಟಕವಾಗಿದೆ. ಈ ವರ್ಷ ಕೇಂದ್ರದಿಂದ 642 ಕೋಟಿ ರೂ. ಮತ್ತು ರಿಚಾರ್ಡ್​​ನಲ್ಲಿ 640 ಕೋಟಿ ರೂ. ಹಣ ಬಂದಿದೆ ಎಂದರು.

4,954 ಹುದ್ದೆಗಳು ಖಾಲಿ : ಕೃಷಿ ಇಲಾಖೆಯಲ್ಲಿ 9,017 ಹುದ್ದೆಗಳು ಮಂಜೂರಾಗಿದ್ದವು. 4,053 ಹುದ್ದೆಗಳು ಭರ್ತಿಯಾಗಿದ್ದು, 4,954 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತ ನಂತರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಸಚಿವರು ಇದೇ ವೇಳೆ ಹೇಳಿದರು.

ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಸಭೆ : ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಬರುವ 11 ಜಿಲ್ಲೆಗಳಲ್ಲಿ ವಾಸಿಸುವ ಮಲೆಕುಡಿಯ ಹಾಗೂ ಇತರೆ ಬುಡಕಟ್ಟು ಜನಾಂಗದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಅಧಿವೇಶನದ ಬಳಿಕ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಶಾಸಕರ ಸಭೆ ನಡೆಸುವುದಾಗಿ ಸಾರಿಗೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ವಿಧಾನಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಪ್ರಶ್ನೆಗೆ ಉತ್ತರಿಸಿದರು.

ಬೆಳಗಾವಿ, ಧಾರವಾಡ, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಮೈಸೂರು, ಹಾಸನ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಬುಡಕಟ್ಟು ಜನಾಂಗದ ಅಭಿವೃದ್ದಿಗಾಗಿ ಕಾನೂನುಗಳಲ್ಲಿ ಮೂಲಸೌಕರ್ಯಕ್ಕಾಗಿ 3 ವರ್ಷಗಳಲ್ಲಿ 104 ಕೋಟಿ ರೂ. ಮಂಜೂರಾಗಿದೆ.

65 ಕೋಟಿ ರೂ. ಬಿಡುಗಡೆಯಾಗಿದೆ. ಶೈಕ್ಷಣಿಕ, ಸಾಮಾಜಿಕ ಸಬಲೀಕರಣ, ಆರ್ಥಿಕ ಅಭಿವೃದ್ಧಿ, ತರಬೇತಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಬುಡಕಟ್ಟು ಜನಾಂಗಕ್ಕಾಗಿ 64 ಆಶ್ರಮ ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಈ ಉತ್ತರದಿಂದ ಶಾಸಕರೂ ತೃಪ್ತರಾಗದಿದ್ದಾಗ ಮಧ್ಯಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಅರಣ್ಯ ಸಚಿವರು, ಶಾಸಕರು, ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಲು ಸಲಹೆ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಅಧಿವೇಶನದ ನಂತರ ಸಭೆ ನಡೆಸುವುದಾಗಿ ಹೇಳಿದರು.

ನೆಲಮಂಗಲದಲ್ಲಿ ಹಾಸ್ಟೆಲ್ ಸಮಸ್ಯೆಗೆ ಪರಿಹಾರ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತಿದೆ. ಅದಕ್ಕೆ ಹೋಗಲು ರಸ್ತೆ ಇಲ್ಲದಂತಾಗಿದೆ. ರಸ್ತೆಗೆ ಬೇಕಾದ ಜಾಗವನ್ನು ಭೂಸ್ವಾಧೀನ ಮಾಡಿಕೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜೆಡಿಎಸ್ ಶಾಸಕ ಡಾ.ಕೆ.ಶ್ರೀನಿವಾಸ್ ಮೂರ್ತಿ ಪ್ರಶ್ನೆಗೆ ಉತ್ತರಿಸಿದ ಅವರು, 3 ಕೋಟಿ ರೂ. ವೆಚ್ಚದಲ್ಲಿ ಭಾಗಶಃ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡ ಸಾಮಾಗ್ರಿ ಸಾಗಿಸಲು ಖಾಸಗಿ ಜಮೀನಿನ ಮಾಲೀಕರು ಅಡ್ಡಿಪಡಿಸುತ್ತಿದ್ದಾರೆ. ಈ ಸಮಸ್ಯೆ ಬಗೆಹರಿಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಹಿಂದುಳಿದ ವರ್ಗಗಳ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.

ಸಮಸ್ಯೆ ಬಗೆಹರಿದ ನಂತರ ಕಾಮಗಾರಿ ಪೂರ್ಣಗೊಳಿಸಲಾಗುವುದು. ಜತೆಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಹಾಸ್ಟೆಲ್‍ಗೆ ಬೇಕಾದ ರಸ್ತೆ ನಿರ್ಮಿಸಲು ಜಮೀನು ಭೂಸ್ವಾನ ಮಾಡಿಕೊಳ್ಳಲು ಸೂಚಿಸಲಾಗಿದೆ. ಈ ವಿಚಾರದಲ್ಲಿ ದುರ್ಬಳಕೆಯಾಗಿದ್ದರೂ ತನಿಖೆ ನಡೆಸಲಾಗುವುದು. ಈ ಸಂಬಂಧ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇದನ್ನೂ ಓದಿ: ಹೆಸರಿಲ್ಲದೆ ಬ್ಯಾನರ್‌ ಹಾಕುವವರು ಹೇಡಿಗಳು, ಕ್ರೂರಿಗಳು ಎಂದ ಪ್ರತಿಪಕ್ಷದ ಉಪ ನಾಯಕಖಾದರ್‌.. ಸದನದಲ್ಲಿ ಕೋಲಾಹಲ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.