ETV Bharat / city

ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ; ಸಚಿವ ಸುಧಾಕರ್‌ ರಾಜೀನಾಮೆಗೆ ಆಪ್ ಆಗ್ರಹ

ರಾಜ್ಯ ಆರೋಗ್ಯ ಇಲಾಖೆಯಲ್ಲಿ ಅಕ್ರಮ ನಡೆದಿರುವುದಾಗಿ ಆಮ್ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆರೋಪಿಸಿದ್ದಾರೆ. ಈ ಕುರಿತು ರಾಜ್ಯಪಾಲರು ಮಧ್ಯ ಪ್ರವೇಶಿಸಿ ನಿಷ್ಪಕ್ಷಪಾತ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಆರೋಗ್ಯ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

allegations-of-corruption-in-health-department-allegations-made-by-aap
ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ; ಸಚಿವ ಸುಧಾಕರ್‌ ರಾಜೀನಾಮೆ ಆಪ್ ಆಗ್ರಹ
author img

By

Published : Mar 21, 2022, 3:12 PM IST

‌ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿವೆ ಎನ್ನಲಾದ ವಿವಿಧ ಅಕ್ರಮಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದೆ.

ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಆರೋಗ್ಯ ಇಲಾಖೆಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ ನೇಮಕಾತಿ, ಬಡ್ತಿ ಹಾಗೂ ವರ್ಗಾವಣೆಯಲ್ಲಿ ಭ್ರಷ್ಟಾಚಾರವು ಎಗ್ಗಿಲ್ಲದೇ ನಡೆಯುತ್ತಿದೆ. ಜೊತೆಗೆ ವೈದ್ಯಕೀಯ ಉಪಕರಣಗಳು ಹಾಗೂ ಔಷಧಿಗಳ ಖರೀದಿ, ನಿರ್ಮಾಣ ಕಾಮಗಾರಿ, ಹಾಗೂ ಮೂಲಸೌಕರ್ಯ ಕಲ್ಪಿಸುವುದರಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಯುತ್ತಿರುವುದಾಗಿ ಆರೋಪಿಸಿದರು.

ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಪಡೆಯಲು ರೋಗಿಗಳು ಲಂಚ ನೀಡಬೇಕಾಗಿದೆ. ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಹಾಗೂ ಬಿಜೆಪಿಯ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿಯವರು ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಹಾಗೂ ಔಷಧಿ ಖರೀದಿಯಲ್ಲಿ ಭಾರಿ ಅಕ್ರಮ ನಡೆದಿರುವುದಾಗಿ ಆರೋಪಿಸಿ ಲೋಕಾಯುಕ್ತಕ್ಕೆ 40 ದೂರು ನೀಡಿದ್ದರು. ಈ ಸಂಬಂಧ ತನಿಖೆಯೇ ನಡೆಯದಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂಬಂಧ ಆರೋಗ್ಯ ಸಚಿವರು ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆ ನಡೆದರೆ ಆರೋಗ್ಯ ಇಲಾಖೆಯಲ್ಲಿನ ಕೋಟಿಗಟ್ಟಲೇ ಅವ್ಯವಹಾರ ಬಯಲಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯಪಾಲರು ಶೀಘ್ರವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕ್ರಮಕೈಗೊಳ್ಳಬೇಕು ಎಂದು ನಂಜಪ್ಪ ಕಾಳೇಗೌಡ ಒತ್ತಾಯಿಸಿದರು.

ನಿವೃತ್ತ ಕೆಎಎಸ್‌ ಅಧಿಕಾರಿ ಹಾಗೂ ಎಎಪಿಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ರವಿಶಂಕರ್‌ ಮಾತನಾಡಿ, ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳ ಹಣದ ದಾಹಕ್ಕೆ ಸಾಮಾನ್ಯ ರೋಗಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಿಂದ ರೋಗಿಯ ಶವವನ್ನು ಹೊರತರಬೇಕಾದರೂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಲಂಚ ನೀಡಬೇಕಾಗಿದೆ. ಆರೋಗ್ಯ ಇಲಾಖೆಯ ಟೆಂಡರ್‌ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಗಾಳಿಗೆ ತೂರುವುದು ಸಾಮಾನ್ಯವಾಗಿದ್ದರೂ, ಯಾರ ವಿರುದ್ಧವೂ ತನಿಖೆ ನಡೆಯುತ್ತಿಲ್ಲ. ಭ್ರಷ್ಟ ಸಚಿವರಿಂದಾಗಿ ಇಲಾಖೆಯ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓದಿ :133 ಜನರಿದ್ದ ವಿಮಾನ ಪತನ... ಎಲ್ಲರೂ ಸುಟ್ಟು ಭಸ್ಮವಾಗಿರುವ ಶಂಕೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.