ETV Bharat / city

ಶೀಘ್ರದಲ್ಲೇ ಅರ್ಕಾವತಿ ಬಡಾವಣೆ ನಿವೇಶನಗಳ ಹಂಚಿಕೆ: ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ - ಶೀಘ್ರದಲ್ಲೇ ನಿವೇಶನಗಳ ಹಂಚಿಕೆ

ಅರ್ಕಾವತಿ ಬಡಾವಣೆಯಲ್ಲಿ ನಿವೇಶನಕ್ಕಾಗಿ ಹಣ ಪಾವತಿ ಮಾಡಿದ ಸಾರ್ವಜನಿಕರು ನಿವೇಶನ ಮಂಜೂರು ಮಾಡುವಂತೆ ಅಧ್ಯಕ್ಷರಲ್ಲಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಈಗಷ್ಟೇ ಅಧಿಕಾರ ವಹಿಸಿಕೊಂಡಿದ್ದು, ಪ್ರತಿಯೊಂದು ಬಡಾವಣೆಗಳ ಸ್ಥಿತಿಗತಿ ಬಗ್ಗೆ ಪ್ರತ್ಯೇಕವಾಗಿ ಮಾಹಿತಿಗಳನ್ನು ಅಧಿಕಾರಿಗಳಿಂದ ಸಂಗ್ರಹ ಮಾಡುತ್ತಿದ್ದೇನೆ. ಪ್ರತಿಯೊಂದು ಬಡಾವಣೆಯ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡುತ್ತಿದ್ದೇನೆ ಎಂದರು.

ಎಸ್.ಆರ್. ವಿಶ್ವನಾಥ್
ಎಸ್.ಆರ್. ವಿಶ್ವನಾಥ್
author img

By

Published : Dec 2, 2020, 9:44 PM IST

ಬೆಂಗಳೂರು: ಅರ್ಕಾವತಿ ಬಡಾವಣೆಯಲ್ಲಿ ನಿವೇಶನಕ್ಕಾಗಿ ಹಣ ಪಾವತಿ ಮಾಡಿರುವವರಿಗೆ ಆದಷ್ಟು ಬೇಗ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಬುಧವಾರ ಅರ್ಕಾವತಿ ಬಡಾವಣೆಯಲ್ಲಿ ನಿವೇಶನಕ್ಕಾಗಿ ಹಣ ಪಾವತಿ ಮಾಡಿದ ಸಾರ್ವಜನಿಕರು ನಿವೇಶನ ಮಂಜೂರು ಮಾಡುವಂತೆ ಅಧ್ಯಕ್ಷರಲ್ಲಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಡಿಎ ಅಧ್ಯಕ್ಷರು, ಈಗಷ್ಟೇ ಅಧಿಕಾರ ವಹಿಸಿಕೊಂಡಿದ್ದು, ಪ್ರತಿಯೊಂದು ಬಡಾವಣೆಗಳ ಸ್ಥಿತಿಗತಿ ಬಗ್ಗೆ ಪ್ರತ್ಯೇಕವಾಗಿ ಮಾಹಿತಿಗಳನ್ನು ಅಧಿಕಾರಿಗಳಿಂದ ಸಂಗ್ರಹ ಮಾಡುತ್ತಿದ್ದೇನೆ. ಪ್ರತಿಯೊಂದು ಬಡಾವಣೆಯ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡುತ್ತಿದ್ದೇನೆ ಎಂದರು.

ಎಲ್ಲವನ್ನೂ ಅರ್ಥ ಮಾಡಿಕೊಂಡು ಸಾರ್ವಜನಿಕ ಸ್ನೇಹಿಯಾದ ನಿರ್ಧಾರಗಳನ್ನು ಕೈಗೊಳ್ಳಲು ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ. ಪ್ರಮುಖವಾಗಿ ಅರ್ಕಾವತಿ ಬಡಾವಣೆಯ ಸಮಸ್ಯೆ ಮತ್ತು ಇನ್ನಿತr ಅಡೆತಡೆಗಳ ಬಗ್ಗೆ ಆಯುಕ್ತರೊಂದಿಗೆ ಚರ್ಚಿಸಿ ಹಣ ಪಾವತಿ ಮಾಡಿರುವ ಎಲ್ಲರಿಗೂ ನ್ಯಾಯ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ಇದೇ ರೀತಿ ಇತರ ಬಡಾವಣೆಗಳ ಸಮಸ್ಯೆಗಳನ್ನು ಹಂತ ಹಂತವಾಗಿ ನಿವಾರಣೆ ಮಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ ಅವರು, ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಕಾರ್ಯವನ್ನೂ ಆದಷ್ಟೂ ಶೀಘ್ರದಲ್ಲಿ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.